ನಾಪೋಕ್ಲು, ಮಾ. ೧೫: ಸಮೀಪದ ಕಬಡಕೇರಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮ ಹಾಗೂ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದವರನ್ನು ಗುರುತಿಸಿ ಸನ್ಮಾನಿಸಿ, ಗೌರವಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತಿ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಬಡಕೇರಿಯ ಹಿಂದೂ ರುದ್ರಭೂಮಿ ಸೇವಾ ಸಮಿತಿ ವತಿಯಿಂದ ಸಮಾಜದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಮುಮ್ತಾಜ್, ಅಂಗನವಾಡಿ ಕಾರ್ಯಕರ್ತೆ ತಂಸೀನ ಬಾನು ಎಂ.ಈ. ಹಾಗೂ ಅಂಗನವಾಡಿ ಸಹಾಯಕಿ ಪ್ರೇಮ ಬಿ.ಜಿ., ಧರ್ಮಸ್ಥಳ ಸಂಘದ ವತಿಯಿಂದ ಸೇವಾಪ್ರತಿನಿಧಿಯಾಗಿ ೧೧ ವರ್ಷಗಳ ಕಾಲ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಮ್ತಾಜ್, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಹಂಸಾವತಿ ಹಾಗೂ ಪೂಜಾಶ್ರೀ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸು, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಹಂಸಾವತಿ, ಹಿಂದೂ ರುದ್ರಭೂಮಿಯ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಕುಮಾರ ಪ್ರಸಾದ್, ಚೌರೀರ ಸಲೀನ ಜಗತ್, ಶಿಕ್ಷಕಿ ಸ್ಮಿತಾ, ಮಹಿಳಾ ಸಮಾಜದ ಉಪಾಧ್ಯಕ್ಷೆ ರುಕ್ಮಿಣಿ, ಆಶಾ ಕಾರ್ಯಕರ್ತೆ ಮುಮ್ತಾಜ್ ಎಂ.ಈ., ಕಾವೇರಿ ಸ್ತಿçà ಶಕ್ತಿ ಸಂಘದ ಅಧ್ಯಕ್ಷೆ ಜಲಜಾಕ್ಷಿ, ಬಾಲ ವಿಕಾಸ ಸಮಿತಿಯ ಸದಸ್ಯರಾದ ಸುರೇಶ್, ಡಾ. ಪೂಜಾಶ್ರೀ, ನಿವ್ಯ ಕುಮಾರಿ, ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಈ ಸಂದರ್ಭ ಮಹಿಳಾ ದಿನಾ ಚರಣೆ ಪ್ರಯುಕ್ತ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು ಬಹುಮಾನ ವಿತರಿಸಿದರು.