ಗೋಣಿಕೊಪ್ಪಲು, ಮಾ. ೧೫: ಕಳೆದ ೧೨ ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದ ವೀರಾಜಪೇಟೆಯ ಜೋಕಿಂ ರಾಡ್ರಿಕ್ಸ್ ಪಕ್ಷ ಹಾಗೂ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ ಜೋಕಿಂ ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.