ಮಡಿಕೇರಿ, ಮಾ. ೧೫: ಮಡಿಕೇರಿ ನಗರದಲ್ಲಿ ಅಕ್ರಮವಾಗಿ ಎಂಡಿಎAಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪೊಲೀಸರು ಈ ಸಂಬAಧ ಓರ್ವನನ್ನು ಬಂಧಿಸಿದ್ದಾರೆ.

ತಾ. ೧೪ ರಂದು ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಎಂಡಿಎAಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸುಳಿವರಿತ ಪೊಲೀಸರು ದಾಳಿ ಮಾಡಿ ಎಂ.ಹೆಚ್. ಸಯ್ಯದ್ ಹುಸೈನ್ (೨೭) ಎಂಬಾತನನ್ನು ಬಂಧಿಸಿದ್ದಾರೆ. ಆತನ ಬಳಿ ಇದ್ದ ೩.೦೬ ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾರ್ಗದರ್ಶನದಲ್ಲಿ ಸೆನ್ ಪೊಲೀಸ್ ಠಾಣೆ ನಿರೀಕ್ಷಕ ಜೆ.ಕೆ. ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.