ಮಡಿಕೇರಿ, ಮಾ. ೧೫: ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿವಿಧ ಮನೆಗಳಿಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಗ್ಯಾರಂಟಿ ಕಾರ್ಡ್ನಲ್ಲಿ ನೀಡಿರುವ ಭರವಸೆಗಳು ಈಡೇರಲಿವೆ ಎಂದರು.

ಪಕ್ಷದ ನಾಯಕರು ಉತ್ತಮ ಯೋಜನೆಯನ್ನು ರೂಪಿಸಿದ್ದು, ಮತದಾರರು ಈ ಬಾರಿ ಕಾಂಗ್ರೆಸ್‌ನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವÀರು, ಬೆಲೆ ಏರಿಕೆಯ ಬಿಜೆಪಿಯಿಂದ ಜನರು ಬೇಸತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ. ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಕಾರ್ಡ್ ಅಭಿಯಾನದಲ್ಲಿ ಮಡಿಕೇರಿ ನಗರದ ಬೂತ್ ಸಂಖ್ಯೆ ೨೦೧, ೨೦೯ ಮತ್ತು ೨೧೯ರಲ್ಲಿ ಕಾರ್ಡ್ ವಿತರಿಸಲಾಯಿತು.

ಮಾಜಿ ಸಚಿವ ಬಿ.ಎ. ಜೀವಿಜಯ, ಯುವ ಮುಖಂಡ ಡಾ. ಮಂಥರ್ ಗೌಡ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ. ಹಂಸ ಮತ್ತಿತರ ಮುಖಂಡರು, ನಗರ, ಬ್ಲಾಕ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಮಡಿಕೇರಿ ನಗರದ ಮನೆಮನೆಗಳಿಗೆ ವಿತರಿಸಿರುತ್ತಿರುವ ಕಾಂಗ್ರೆಸ್ ಗ್ಯಾರೆಂಟಿ ಬಾಂಡ್ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಹಾಗೂ ಯುವ ಮುಖಂಡ ಡಾ. ಮಂಥರ್ ಗೌಡ ಕೈ ಜೋಡಿಸಿದರು.

ನಗರದ ಕಾನ್ವೆಂಟ್ ಜಂಕ್ಷನ್, ವಿದ್ಯಾನಗರ ಹಾಗೂ ಹೊಸ ಬಡಾವಣೆಗಳ ಮನೆ ಮನೆಗೆ ತೆರಳಿದ ಕಾಂಗ್ರೆಸ್ ತಂಡ ತಮ್ಮ ಪಕ್ಷದ ಯೋಜನೆಗಳನ್ನು ಜನರಿಗೆ ವಿವರಿಸಿ ಬಾಂಡ್ ವಿತರಿಸಿದರು.

ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಪ್ರಮುಖರಾದ ಕಾವೇರಮ್ಮ ಸೋಮಣ್ಣ, ಚುಮ್ಮಿ ದೇವಯ್ಯ, ಮಂಡಿರ ಸದಾ ಮುದ್ದಪ್ಪ, ಪ್ರಕಾಶ್ ಆಚಾರ್ಯ, ಜೆ.ಸಿ. ಜಗದೀಶ್, ಯಶ್ ದೋಲ್ಪಾಡಿ, ಮುದ್ದು ರಾಜ್, ಫ್ಯಾನ್ಸಿ ಪಾರ್ವತಿ, ಮಮ್ತಾಜ್ ಬೇಗಂ, ಆರ್.ಪಿ. ಚಂದ್ರಶೇಖರ್, ರವೂಫ್ ಶೇಖ್, ಬೂತ್ ಸಮಿತಿ ಅಧ್ಯಕ್ಷೆ ಪ್ರೇಮ, ದಿವ್ಯಾ, ಪ್ರೇಮಾ ನಿಂಗಪ್ಪ, ಪ್ರೇಮಾ ಕೃಷ್ಣಪ್ಪ, ಖಲೀಲ್ ಬಾಷಾ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.