ಸೋಮವಾರಪೇಟೆ, ಮಾ. ೧೬: ಇಲ್ಲಿನ ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ಸ್ಥಳೀಯ ಮಹಿಳಾ ಸಮಾಜ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ದಿನಾಚರಣೆ ಅಂಗವಾಗಿ ಮಹಿಳೆಯರಿಂದ ವಿವಿಧ ಕಾರ್ಯಕ್ರಮಗಳು ಮೂಡಿಬಂದವು. ಯಡೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಪ್ರೇಮಾ ಅವರು ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸೃಷ್ಟಿಯ ಚಿಗುರು ಕವಿ ಬಳಗದ ಅಧ್ಯಕ್ಷ ಕೆ.ಪಿ. ಸುದರ್ಶನ್, ನ.ಲ. ವಿಜಯ, ಪದಾಧಿಕಾರಿಗಳಾದ ಆಶಾ ಪುಟ್ಟರಾಜು, ದೀಪಿಕಾ ಸುದರ್ಶನ್, ಅನಿತಾ ಶುಭಕರ್, ಜಲಜಾ, ಶಾರದಾ ಪುರುಷೋತ್ತಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.