ವೀರಾಜಪೇಟೆ, ಮಾ. ೧೫: ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪುö್ಪ, ತರಕಾರಿ, ಹಣ್ಣು, ಖನಿಜಯುಕ್ತ ಆಹಾರ ಸೇವಿಸುವು ದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ ಎಂದು ಹಿರಿಯ ವಕೀಲ ಹಾಗೂ ಎ.ಕೆ. ಸುಬ್ಬಯ್ಯ ಪೊನ್ನಮ್ಮ ದತ್ತಿನಿಧಿ ವ್ಯವಸ್ಥಾಪಕ ಎ.ಎಸ್. ಪೊನ್ನಣ್ಣ ಹೇಳಿದರು.

ಎ.ಕೆ ಸುಬ್ಬಯ್ಯ ಪೊನ್ನಮ್ಮ ದತ್ತಿನಿಧಿ ವ್ಯವಸ್ಥಾಪಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ eviಜhಥಿಚಿ.ಛಿom ಸಹಭಾಗಿತ್ವದಲ್ಲಿ ವೀರಾಜಪೇಟೆಯ ಮಗ್ಗುಲದಲ್ಲಿರುವ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಉಚಿತ ದಂತ ತಪಾಸಣೆ ಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದ ಅವರು, ದಂತ ಮಹಾವಿದ್ಯಾಲಯದ ಮೂಲಕ ಹಲವಾರು ಬಾರಿ ಈ ರೀತಿಯ ಶಿಬಿರಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಕೊಡಗಿನ ಈ ದಂತ ಮಹಾವಿದ್ಯಾಲಯ ಅಂತರರಾಷ್ಟಿçÃಯ ಮಟ್ಟದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಸಮಾಜದ ಎಲ್ಲಾ ವರ್ಗದ ಜನರಿಗೂ ಈ ರೀತಿಯ ಚಿಕಿತ್ಸಾ ಸೌಲಭ್ಯಗಳು ದೊರಕುವಂತಾಗಬೇಕು ಎನ್ನುವ ಆಶಯದೊಂದಿಗೆ ಶಿಬಿರ ಆಯೋಜಿಸಲಾಗಿದೆ. ಹಾಗೆಯೇ ದಂತದ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿಕೊಳ್ಳುವಂತಾಗಬೇಕು. ಪ್ರತ್ಯೇಕ ಬ್ರಷ್‌ನಲ್ಲಿ ಹಲ್ಲು ಉಜ್ಜುವು ಅಭ್ಯಾಸ ಇಟ್ಟಿಕೊಳ್ಳಬೇಕು. ದಂತದ ಸಮಸ್ಯೆ ಉಂಟಾದಲ್ಲಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದರು.

ಶಿಬಿರದಲ್ಲಿ ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸುನಿಲ್ ಮುದ್ದಯ್ಯ ಸೇರಿದಂತೆ ಕಾಲೇಜಿನ ಪ್ರಾಂಶುಪಾಲರು, ವೈದ್ಯರುಗಳು ಹಾಜರಿದ್ದರು.