ಕುಶಾಲನಗರ, ಮಾ. ೧೬ : ಕುಶಾಲನಗರ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜ ಆಶ್ರಯದಲ್ಲಿ ತಾ. ೧೭ರಂದು ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಗೌಡ ಸಮಾಜ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷÀ ಎಂ.ಎಸ್. ಚಿಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೩ ಗಂಟೆ ತನಕ ಶಿಬಿರ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಸಂಯೋಜಕ ಕೊಡಗನ ಹರ್ಷ ಮಾತನಾಡಿ, ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದರು. ಶಿಬಿರದಲ್ಲಿ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಸುಮನ್ ಇದ್ದರು.