ವೀರಾಜಪೇಟೆ, ಮಾ. ೧೬: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟಿçÃಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಹೇಳಿದರು.
ವೀರಾಜಪೇಟೆ ಪುರಭವನದಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಮುಂದಿನ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ ೨೦೨೩ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು.
ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ. ವೀರಾಜಪೇಟೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಈ ಹಿಂದೆ ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು ಹಾಗೂ ಅವರ ಜನಪರ ಯೋಜನೆಗಳನ್ನು ಈಗಾಗಲೇ ಜನರ ಮನೆ ಬಾಗಿಲಿಗೆ ಹಂಚಲಾಗುತ್ತಿದೆ. ಜನಪರ ಸೇವೆಯಿಂದ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ವೀರಾಜಪೇಟೆ ವಿಧಾನ ಸಭಾಕ್ಷೇತ್ರದ ಜೆಡಿಎಸ್ ಪಕ್ಷದ ಅಧ್ಯಕ್ಷ ಪಿ.ಎ. ಮಂಜುನಾಥ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೀರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ೧೬೦ಕ್ಕೂ ಹೆಚ್ಚು ಬೂತ್ ಸಮಿತಿಗಳನ್ನು ರಚಿಸಲಾಗಿದ್ದು, ೨೪ ವೀರಾಜಪೇಟೆ, ಮಾ. ೧೬: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಎರಡು ರಾಷ್ಟಿçÃಯ ಪಕ್ಷಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಹೇಳಿದರು.
ವೀರಾಜಪೇಟೆ ಪುರಭವನದಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಮುಂದಿನ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮತದಾರರು ಜೆಡಿಎಸ್ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರಿದ್ದಾರೆ. ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಸಂದರ್ಭ ಪಕ್ಷದ ಏಳಿಗೆಗೆ ಕೆಲಸಮಾಡುವ ಮೂಲಕ ೨೦೨೩ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮ ವಹಿಸಬೇಕು ಎಂದರು.
ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ, ಮಡಿಕೇರಿ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವು ಖಚಿತ. ವೀರಾಜಪೇಟೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಈ ಹಿಂದೆ ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಕೊಡಗಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದರು ಹಾಗೂ ಅವರ ಜನಪರ ಯೋಜನೆಗಳನ್ನು ಈಗಾಗಲೇ ಜನರ ಮನೆ ಬಾಗಿಲಿಗೆ ಹಂಚಲಾಗುತ್ತಿದೆ. ಜನಪರ ಸೇವೆಯಿಂದ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ವೀರಾಜಪೇಟೆ ವಿಧಾನ ಸಭಾಕ್ಷೇತ್ರದ ಜೆಡಿಎಸ್ ಪಕ್ಷದ ಅಧ್ಯಕ್ಷ ಪಿ.ಎ. ಮಂಜುನಾಥ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೀರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ೧೬೦ಕ್ಕೂ ಹೆಚ್ಚು ಬೂತ್ ಸಮಿತಿಗಳನ್ನು ರಚಿಸಲಾಗಿದ್ದು, ೨೪