ಗೋಣಿಕೊಪ್ಪಲು, ಮಾ. ೧೬: ಮಹಿಳೆಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊನ್ನಂಪೇಟೆಯ ನಿವಾಸಿ ಮಣಿಕಂಠ ಬಂಧಿತ ಆರೋಪಿ. ಪೊನ್ನಂಪೇಟೆ ತಾಲೂಕಿನ ಗ್ರಾಮವೊಂದರ ವಿವಾಹಿತ ಮಹಿಳೆ ತನ್ನ ದೈನಂದಿನ ಕೆಲಸ ಮುಗಿಸಿ ಸಂಜೆಯ ವೇಳೆ ಮನೆಗೆ ತೆರಳುತ್ತಿದ್ದ ಸಂದರ್ಭ ಆರೋಪಿಯು ಮಹಿಳೆಯನ್ನು ವಾಹನದಲ್ಲಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಲ್ಲದೆ ದೇಹದ ಮೇಲೆ ಕಚ್ಚಿ ಹಲ್ಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ಸಂತ್ರಸ್ತೆಯ ದೂರಿನ ಅನ್ವಯ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಂಧನಕ್ಕೆ ಒಳಪಡಿಸಿದ್ದಾರೆ.