ಮಡಿಕೇರಿ, ಮಾ. ೧೬: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. ೧೭ ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗ ಮೇಳ’ ನಡೆಯಲಿದೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೫೮೫೧ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.