ಕೂಡಿಗೆ, ಮಾ. ೧೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷೆ ಕೆ.ಜೆ. ಗೀತಾ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ದೇವತೆಗಳಾದ ಮಂಟಿಗಮ್ಮ ಮತ್ತು ಶ್ರೀ ಉಮಾಮಹೇಶ್ವರ ಸ್ವಾಮಿ ರಥೋತ್ಸವ ಕಾರ್ಯಕ್ರಮಗಳು ೫ ದಿನಗಳ ಕಾಲ ನಡೆಯುವುದರಿಂದ ಗ್ರಾಮದಲ್ಲಿ ಶುಚಿತ್ವ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಬೀದಿ ದೀಪಗಳ ಅಳವಡಿಕೆಗೆ ಸಂಬAಧಿಸಿದAತೆ ಚರ್ಚೆ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಲತಾ ಅವರು ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅಮೃತ ಗ್ರಾಮ ಯೋಜನೆಗಳ ಬಗ್ಗೆ ಕೈಗೊಳ್ಳುವ ವಿವಿಧ ಕಾರ್ಯಸೂಚಿಗಳ ಬಗ್ಗೆ ಚರ್ಚೆ ನಡೆಯಿತು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಕಾರ್ಯದರ್ಶಿ ಕೆ.ಸಿ. ರವಿ ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ, ಸದಸ್ಯರಾದ ಶ್ರೀಕಾಂತ್, ಪ್ರದೀಪ್, ಬಸವರಾಜ್, ಸರಿತಾ, ಲಕ್ಷಿö್ಮÃ, ಲತಾಬಾಯಿ, ಸೇರಿದಂತೆ ಸಿಬ್ಬಂದಿ ಹಾಜರಿದ್ದರು.