ಕೂಡಿಗೆ ಮಾ. ೧೬ : ಜೀವನದಲ್ಲಿ ಏನಾದರೂ ಸಾಧಿಸುತ್ತೇನೆಂಬ ಛಲ ಹೊಂದಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸಾಂಸ್ಕೃತಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಂತರರಾಷ್ಟಿçÃಯ ಸ್ಕೀಯಿಂಗ್ ಕ್ರೀಡಾಪಟು ಭವಾನಿ ತೆಕ್ಕಡ ನಂಜುAಡ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಚಿಕ್ಕ ಅಳುವಾರದ ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರದಲ್ಲಿನ ಮಾನವಿಕ ಸಂಕೀರ್ಣದಲ್ಲಿ ಮಹಿಳಾ ಕೋಶದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಬದಲಾದ ಕಾಲಘಟ್ಟದಲ್ಲಿ ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಮಹಿಳಾ ಕೋಶದ ಸಂಚಾಲಕಿ ಡಾ. ಬಿ.ಎಸ್. ಗುಣಶ್ರೀ ಅವರು ಈ ವರ್ಷದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಯುಎನ್ ಥೀಮ್ “ಲಿಂಗ ಸಮಾನತೆಗಾಗಿ ನಾವಿನ್ಯತೆ ಮತ್ತು ತಂತ್ರಜ್ಞಾನ” ಎಂದು ಘೋಷಿಸಿದೆ. ಆಚರಣೆಯ ಮುಖ್ಯ ಉದ್ದೇಶ ಲಿಂಗ ಸಮಾನತೆಯನ್ನು ಎತ್ತಿಹಿಡಿಯುವುದು, ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದಾಗಿದೆ ಎಂದರು.
ಈ ಸಂದರ್ಭ ಸಂಸ್ಥೆಯ ಪ್ರಬಾರ ನಿರ್ದೇಶಕ ಪ್ರೊ. ಕೆ. ಕೆ. ಧರ್ಮಪ್ಪ ಅವರು ಅಧ್ಯಕ್ಷತೆಯನ್ನು ವಹಿಸಿ, ಸಮಾಜದಲ್ಲಿ ಸುಸ್ಥಿರ ಅಭಿವೃದ್ಧಿ, ಶಾಂತಿ, ಸುರಕ್ಷತೆ, ಸಾಕ್ಷರತೆ ಸಾಧಿಸಲು ಮಹಿಳೆಯರ ಭಾಗಿತ್ವವನ್ನು ಪುರುಷ ಸಮಾನವಾಗಿಸಲು ಹಲವು ವರ್ಷಗಳಿಂದ ವಿಶ್ವಸಂಸ್ಥೆ ಹಾಗೂ ಅದರ ಅಂಗ ಸಂಸ್ಥೆಗಳು ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುತ್ತಿದೆ. ಅಷ್ಟೇ ಅಲ್ಲದೇ ಲಿಂಗ ಸಮಾನತೆಯ ಪ್ರಾಮುಖ್ಯತೆಯ ಕುರಿತು ಅರಿವು ಮೂಡಿಸುವುದಕ್ಕೂ ಸಹ ಮಹಿಳಾ ದಿನಾಚರಣೆ ಸಹಕಾರಿಯಾಗಿದೆ. ಡಿಜಿಟಲ್ ಯುಗದಲ್ಲಿ ನಾವಿನ್ಯತೆ ಮತ್ತು ತಾಂತ್ರಿಕ ಬದಲಾವಣೆ ಮತ್ತು ಶಿಕ್ಷಣ ತರುವ ನಿಟ್ಟಿನಲ್ಲಿ ಲಿಂಗ ಸಮಾನತೆಯ ಜೊತೆಗೆ ಜಗತ್ತಿನ ಎಲ್ಲಾ ಮಹಿಳೆಯರು ಮತ್ತು ಯುವತಿಯರ ಸಬಲೀಕರಣಕ್ಕಾಗಿ ಪ್ರಯತ್ನಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಾಜಕುಮಾರ ಎಸ್ ಮೇಟಿ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಕನ್ನಡ ಉಪನ್ಯಾಸಕಿ ಎಂ. ಅರ್ಪಿತಾ ನಿರ್ವಹಿಸಿದರು.