ಕಣಿವೆ, ಮಾ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಶೇ. ೨೫ರ ಹಣದಲ್ಲಿ ಪಂಚಾಯಿತಿಯ ನವಗ್ರಾಮದ ಫಲಾನುಭವಿಗೆ ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಕೆ.ಬಿ. ಷಂಶುದ್ದೀನ್ ಅವರು ಹೊಲಿಗೆ ಯಂತ್ರ ವಿತರಿಸಿದರು.

೨೦೨೨-೨೩ನೇ ಸಾಲಿನಲ್ಲಿ ಶೇ. ೨೫ರ ಹಣದಲ್ಲಿ ಕೂಡುಮಂಗಳೂರು ಗ್ರಾ.ಪಂ. ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಹಾಗೂ ಸದಸ್ಯ ಷಂಶುದ್ದೀನ್, ಅನಾರೋಗ್ಯ ಉಂಟಾದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುವುದು. ಆದ್ದರಿಂದ ಅರ್ಹರು ಪಂಚಾಯಿತಿಗೆ ಅರ್ಜಿ ನೀಡಿ, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭ ಪಂಚಾಯಿತಿ ಸದಸ್ಯೆ ಶಿವಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸಿಬ್ಬಂದಿ ಪವಿತ್ರ ಇದ್ದರು.