ಗೋಣಿಕೊಪ್ಪಲು, ಮಾ. ೧೮: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆದಿವಾಸಿಗಳ ಸಮಾವೇಶವು ಪೊನ್ನಂಪೇಟೆಯ ಕೊಡವ ಸಮಾಜ ದಲ್ಲಿ ತಾ. ೨೦ರಂದು ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಅತಿಥಿಯಾಗಿ ಚಿತ್ರ ನಟ ಸಾಧುಕೋಕಿಲ ಆಗಮಿಸಲಿದ್ದಾರೆ.

ಗಿರಿಜನರ ಅರಣ್ಯ ಹಕ್ಕು ಮಸೂದೆ ಜಾರಿ ಕುರಿತು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಗೋಣಿಕೊಪ್ಪಲು, ಮಾ. ೧೮: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆದಿವಾಸಿಗಳ ಸಮಾವೇಶವು ಪೊನ್ನಂಪೇಟೆಯ ಕೊಡವ ಸಮಾಜ ದಲ್ಲಿ ತಾ. ೨೦ರಂದು ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಅತಿಥಿಯಾಗಿ ಚಿತ್ರ ನಟ ಸಾಧುಕೋಕಿಲ ಆಗಮಿಸಲಿದ್ದಾರೆ.

ಗಿರಿಜನರ ಅರಣ್ಯ ಹಕ್ಕು ಮಸೂದೆ ಜಾರಿ ಕುರಿತು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಮಾತನಾಡಲಿದ್ದಾರೆ. ಅಲ್ಲದೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ನಡೆಸಲಿದ್ದಾರೆ.

ಕಾಂಗ್ರೆಸ್ ಜಿಲ್ಲಾ ವಕ್ತಾರ ಆಪಟ್ಟೀರ ಟಾಟೂ ಮೊಣ್ಣಪ್ಪ ಮಾತನಾಡಿ ಪರಿಶಿಷ್ಟ ಪಂಗಡದ ಜನಾಂಗವು ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬಂದಿದೆ. ಇಲ್ಲಿನ ಜನ ಪ್ರತಿನಿಧಿಗಳು ಸೂಕ್ತ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವಲ್ಲಿ ವಿಫಲರಾಗಿದ್ದಾರೆ. ವನ್ಯಜೀವಿ ಹಾಗೂ ಮಾನವ ಸಂಘರ್ಷ ಸಮಸ್ಯೆಗೆ ಇನ್ನೂ ಕೂಡ ಶಾಶ್ವತ ಪರಿಹಾರ ಲಭಿಸಿಲ್ಲ ಎಂದು ದೂರಿದರು.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ಜಿಲ್ಲಾ ಅಧ್ಯಕ್ಷ ಎಸ್.ಎನ್. ರಾಜರಾವ್ ಮಾತನಾಡಿ ಪರಿಶಿಷ್ಟ ವರ್ಗದ ಸಮುದಾಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವ ಮೂಲಕ ಅವರ ಸಮಸ್ಯೆಗಳಿಗೆ ಮುಂದಿನ ದಿನದಲ್ಲಿ ಪರಿಹಾರ ಕಂಡುಕೊಳ್ಳುವ ಯೋಜನೆ ರೂಪಿಸಲಾಗುವುದು. ಹೈಕೋರ್ಟಿನ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರು ಕಾನೂನಾತ್ಮಕವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಾತನಾಡಲಿದ್ದಾರೆ. ಪಕ್ಷದ ಹಲವು ನಾಯಕರು ಆಗಮಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ಎಸ್.ಸಿ. ಘಟಕದ ತಾಲೂಕು ಅಧ್ಯಕ್ಷ ಮಣಿಕುಂಞ ಉಪಸ್ಥಿತರಿದ್ದರು.