ಗೋಣಿಕೊಪ್ಪ ವರದಿ, ಮಾ. ೧೮: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸ್ವಚ್ಛತಾಗಾರ ಹೆಚ್.ಆರ್. ಪರಮೇಶ್ ಅವರ ಮಗಳು ಹೆಚ್.ಪಿ. ಸ್ವಾತಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಹಿನ್ನೆಲೆ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಲ್ಯಾಪ್‌ಟಾಪ್ ನೀಡಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ಸದಾ, ಪಿಡಿಓ ಪುಟ್ಟರಾಜು ಇದ್ದರು.