ಕೂಡಿಗೆ, ಮಾ. ೧೮: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಅಳುವಾರ ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಮತ್ತು ಚಿಕ್ಕಮ್ಮ ದೇವಾಲಯ ಸಮಿತಿಯ ವತಿಯಿಂದ ದೊಡ್ಡಮ್ಮ ಮತ್ತು ಚಿಕ್ಕಮ್ಮ ತಾಯಿಯ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನೂತನ ದೇವಾಲಯಗಳ ಉದ್ಘಾಟನೆಯ ಕಾರ್ಯಕ್ರಮ ದೇವಾಲಯದ ಆವರಣದಲ್ಲಿ ನಡೆಯಿತು.

ರಾಮನಾಥಪುರದ ಮಹೇಶ್ ತಂಡದವರಿAದ ವಿಶೇಷ ಧಾರ್ಮಿಕ ಪೂಜಾ ವಿಧಿವಿಧಾನಗಳ ನಡುವೆ ಹೋಮ ಹವನಗಳು ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ತಾಯಿಯ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಯಿತು.

ಇದರ ಅಂಗವಾಗಿ ಎರಡು ದಿನಗಳಿಂದಲೂ ದೇವಾಲಯದ ಆವರಣದಲ್ಲಿ ಗಣಪತಿ ಹೋಮ, ಕಲಶಾಭಿಷೇಕ, ಕಲಶ ಪೂಜೆ, ಹೋಮ, ಕಲಾತತ್ವ ಹೋಮ ಸೇರಿದಂತೆ ವಿವಿಧ ಅಭಿಷೇಕ ಮತ್ತು ಪೂಜಾ ಕೈಂಕರ್ಯಗಳು ನಡೆಯುವುದರ ಮೂಲಕ ದೊಡ್ಡಮ್ಮ ಮತ್ತು ಚಿಕ್ಕಮ್ಮ ತಾಯಿಯ ಮಹೋತ್ಸವ ಪ್ರತಿಷ್ಠಾಪನಾ ಮತ್ತು ನೂತನ ದೇವಾಲಯದ ಉದ್ಘಾಟನೆ ಕಾರ್ಯಕ್ರಮ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ನಡೆಯಿತು.

ನಂತರ ನಡೆದ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ದೇವಾಲಯಗಳನ್ನು ನಿರ್ಮಾಣ ಮಾಡುವುದರಿಂದ ಧಾರ್ಮಿಕ ಮನೋಭಾವ ಬೆಳೆದು, ಗ್ರಾಮದ ಪ್ರಗತಿ, ದೇವರ ಆಶೀರ್ವಾದ ದೊರೆತು, ಯಾವುದೇ ಗ್ರಾಮದಲ್ಲಿ ರೋಗ ರುಜಿನಗಳು ಬಾರದಂತೆ ಗ್ರಾಮಸ್ಥರು ಒಂದೆಡೆ ಸೇರಿ ಪೂಜೆ ಸಲ್ಲಿಸಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಬೇಬಿಯಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಣ್ಣ, ಹೆಬ್ಬಾಲೆ ದೇವಾಲಯ ಸಮಿತಿಯ ಅಧ್ಯಕ್ಷ ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜ್, ಶಿವಕುಮಾರ್ ಶೋಭಾಪ್ರಕಾಶ್, ತೀರ್ಥಾನಂದ, ದೇವಾಲಯ ಸಮಿತಿಯ ಉಪಾಧ್ಯಕ್ಷ ಮಹದೇವ, ಕಾರ್ಯದರ್ಶಿ ವಿಜಯ, ಮಾಜಿ ಸೈನಿಕ ಯತೀಶ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಗಣೇಶ್ ಕಾರ್ಯಕ್ರಮ ನಿರೂಪಿಸಿ, ಸವಿತರಾಣಿ ಸ್ವಾಗತಿಸಿ, ಯತೀಶ್ ವಂದಿಸಿದರು.