ಶ್ರೀಮಂಗಲ, ಮಾ. ೧೯: ಟಿ. ಶೆಟ್ಟಿಗೇರಿಯ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ವಾರ್ಷಿಕ ಮಹಾಸಭೆಯು ತಾ. ೨೦ ರಂದು (ಇಂದು) ಕೊಡವ ಸಮಾಜ ಅಧ್ಯಕ್ಷ ಚೊಟ್ಟೆಯಾಂಡಮಾಡ ಬೋಸು ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬೆಳಿಗ್ಗೆ ೧೧ ಗಂಟೆಗೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ತಾವಳÀಗೇರಿ ಮೂಂದ್‌ನಾಡ್ ಕೊಡವ ಸಮಾಜದ ಸದಸ್ಯರ ಮಕ್ಕಳಿಗೆ, ದಾನಿ ಕೈಬಿಲೀರ ಪಾರ್ವತಿ ಬೋಪಯ್ಯ ಸ್ಥಾಪಿಸಿದ ದತ್ತಿನಿಧಿ ಬಹುಮಾನ ನೀಡ ಲಾಗುವುದು. ಸಭೆಯಲ್ಲಿ ದಾನಿಗಳಿಗೆ ಶಿಕ್ಷಣ ಕ್ಷೇತ್ರ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಚಿನ್ನದ ಪದಕ ಪಡೆದ ಸದಸ್ಯರ ಮಕ್ಕಳಿಗೆ ಸನ್ಮಾನ ಮಾಡಲಾಗುವುದು ಎಂದು ಕಾರ್ಯದರ್ಶಿ ಮನ್ನೇರ ರಮೇಶ್ ತಿಳಿಸಿದ್ದಾರೆ.