ಕೂಡಿಗೆ, ಮಾ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು, ದೊಡ್ಡತ್ತೂರು, ಸುಂದರನಗರ ಗ್ರಾಮಗಳ ಗ್ರಾಮಸ್ಥರ ಸಹಕಾರದಲ್ಲಿ ಸಾರ್ವಜನಿಕ ಆಟದ ಮೈದಾನ ಅಭಿವೃದ್ಧಿ ಸಮಿತಿ ವತಿಯಿಂದ ನಿರ್ಮಾಣಗೊಂಡಿರುವ ಸಾರ್ವಜನಿಕ ಆಟದ ಮೈದಾನದ ಉದ್ಘಾಟನಾ ಸಮಾರಂಭವು ತಾ. ೨೧ ರಂದು (ಇಂದು) ನಡೆಯಲಿದೆ.

ಮೈದಾನದ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.