ಸೋಮವಾರಪೇಟೆ, ಮಾ. ೨೦: ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾರದ ಪೂಜೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮುಖ್ಯ ಶಿಕ್ಷಕ ಎಂ.ಎA. ಯಶ್‌ವಂತ್‌ಕುಮಾರ್ ಸೇರಿದಂತೆ ಸಹ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ ತರುವಂತೆ ಹಿತವಚನ ನೀಡಿದರು.