ಮುಳ್ಳೂರು, ಮಾ. ೨೦: ಮಹಿಳೆಯರಿಗೆ ಸಮಾನ ಅವಕಾಶ ದೊರೆತರೆ ಎಲ್ಲಾ ಕ್ಷೇತ್ರದಲ್ಲೂ ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಾ.ಪಂ. ಕಾರ್ಯನಿರ್ವ ಹಣಾಧಿಕಾರಿ ಬಿ.ವಿ. ಜಯಣ್ಣ ಅಭಿಪ್ರಾಯಪಟ್ಟರು.

ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕಿನ ಮಹಿಳಾ ಪಿಡಿಓಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶ ನೀಡಿದಲ್ಲಿ ಪುರುಷರಿಗೆ ಸರಿಸಮಾನರಾಗಿ ಸಾಧನೆ ಮಾಡಲು ಅನುಕೂಲವಾಗುತ್ತದೆ. ಸರಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ಸೋಮವಾರಪೇಟೆಯ ಕವಿಯತ್ರಿ ರಾಣಿ ರವೀಂದ್ರ ಮಾತನಾಡಿ, ಯೂರೋಪ್‌ನಲ್ಲಿ ಸಮಾನ ವೇತನಕ್ಕಾಗಿ ನಡೆದ ಹೋರಾಟವು ಮಹಿಳೆಯರಿಗೆ ಪ್ರೇರಣೆಯಾದ ನಂತರದ ದಿನಗಳಲ್ಲಿ ವಿಶ್ವಸಂಸ್ಥೆಯು ಮಹಿಳೆಯರಿಗೆ ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ನೀಡಲು, ಮಹಿಳೆಯರ ಮೇಲಿನ ಶೋಷಣೆಯನ್ನು ತಡೆಗಟ್ಟಲು ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನಾಗಿ ಮೀಸಲಿಟ್ಟಿದೆ ಎಂದರು.

ಕಾರ್ಯಕ್ರಮದಲ್ಲಿ ತಾ.ಪಂ. ಅಭಿವೃದ್ಧಿ ಅಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಹೆಚ್.ಡಿ. ಹರೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಗ್ರಾ.ಪಂ.ಗಳ ಪಿಡಿಓಗಳಾದ ಕಾವೇರಿ, ರಾಣಿ ರವೀಂದ್ರ, ವೀಣಾ, ಆಯೇ಼ಷ, ಅಸ್ಮ, ಲಿಖಿತ, ಮಂಜುಳ, ಸ್ಮಿತಾ ಇವರು ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ರವೀಶ್, ಪದಾಧಿಕಾರಿಗಳಾದ ಪೂರ್ಣಕುಮಾರ್, ಹೆಚ್.ಎಸ್. ಹರೀಶ್, ರವಿ ಕೆ. ನಾಯಕ್, ರಜನಿ ಮುಂತಾದವರು ಉಪಸ್ಥಿತರಿದ್ದರು.