ಕೂಡಿಗೆ, ಮಾ. ೨೧: ರಾಜ್ಯ ಸರಕಾರವು ನೂತನವಾಗಿ ಘೋಷಣೆ ಮಾಡಿರುವ ಕೊಡಗು ವಿಶ್ವವಿದ್ಯಾನಿಲಯದ ಮೊದಲ ಕುಲಪತಿಯಾಗಿ ಮೂಲತಃ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ಡಾ. ಅಶೋಕ ಸಂಗಪ್ಪ ಆಲೂರು ಇವರನ್ನು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿರುವ ಜಿಲ್ಲೆಯ ಪ್ರಥಮ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಇವರು ನೇಮಕಗೊಂಡಿದ್ದಾರೆ.