ಕುಶಾಲನಗರ, ಮಾ. ೨೧: ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದರು.
ಸುಮಾರು ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡ ಭೂಮಿಪೂಜೆ ನೆರವೇರಿಸಿ ಶಾಸಕ ರಂಜನ್ ಅವರು, ಕಾಲೇಜಿನ ಆವರಣದಲ್ಲಿರುವ ಮೂರು ವಿದ್ಯಾರ್ಥಿ ನಿಲಯ ಕಟ್ಟಡಗಳನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ರಂಜನ್ ಅವರು, ಹತ್ತು ವರ್ಷಗಳ ಹಿಂದೆ ಸ್ವಂತ ಕಟ್ಟಡದಲ್ಲಿ ಪ್ರಾರಂಭವಾಗಿರುವ ಸರಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸಲು ವಿದ್ಯಾರ್ಥಿ-ವಿದ್ಯಾರ್ಥಿ ನಿಯರಿಗೆ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ.
ಬಾಲಕಿಯರ ಮತ್ತು ಬಾಲಕರಿಗೆ ಅಗತ್ಯವಿರುವ ಹಾಸ್ಟೆಲ್ ಕಟ್ಟಡಗಳನ್ನು ಸುಮಾರು ೬ ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್. ಸತೀಶ್, ೨೦೦೮ರಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರಂಭಗೊAಡ ಸರಕಾರಿ ಇಂಜಿನಿಯರಿAಗ್ ಕಾಲೇಜು ೨೦೧೩ರಲ್ಲಿ ಸ್ವಂತ ಕಟ್ಟಡದಲ್ಲಿ ಹಲವು ವಿಭಾಗಗಳನ್ನು ಒಳಗೊಂಡAತೆ ಪ್ರಾರಂಭಗೊAಡಿದೆ.
ಸುಮಾರು ೩ ಸಾವಿರಕ್ಕೂ ಅಧಿಕ ಇಂಜಿನಿಯರಿAಗ್ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ನೀಡುವ ಕೆಲಸ ಸಾಗಿದೆ. ಕ್ಷೇತ್ರ ಶಾಸಕ ರಂಜನ್ ಅವರ ಕಾಳಜಿಯಿಂದ ಕಾಲೇಜಿಗೆ ಬಹುತೇಕ ಮೂಲಭೂತ ಸೌಕರ್ಯಗಳು ದೊರೆತಿವೆ ಎಂದರು.
ಕುಶಾಲನಗರ ಪುರಸಭೆ ಅಧ್ಯಕ್ಷ ಜಯವರ್ಧನ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಲೋಕೇಶ್ ಅವರುಗಳು ಮಾತನಾಡಿದರು. ಈ ಸಂದರ್ಭ ಶಾಸಕ ರಂಜನ್, ಕುಶಾಲನಗರದ ಹಿರಿಯರಾದ ವಿ.ಎನ್. ವಸಂತಕುಮಾರ್ ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇಂಜಿನಿಯರಿAಗ್ ಕಾಲೇಜಿನ ವಿಭಾಗ ಮುಖ್ಯಸ್ಥ ಡಾ. ಸೀನಪ್ಪ, ಪುರಸಭೆ ಸದಸ್ಯ ಅಮೃತರಾಜ್, ನಿವೃತ್ತ ಪ್ರಾಂಶುಪಾಲರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಮುಖರಾದ ರಾಮಶೆಟ್ಟಿ, ಭಾಸ್ಕರ ನಾಯಕ್, ಕೆಂಚಪ್ಪ,, ಕೃಷ್ಣಪ್ಪ, ದರ್ಶನ್ ಮತ್ತು ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.