ಮಡಿಕೇರಿ ಮಾ. ೨೧: ೨೦೨೨-೨೩ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯ ಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿ ಗಳಿಂದ ಮಾತ್ರ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ತಾ. ೨೭ ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು hಣಣಠಿ://shಠಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ.೨.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ ರೂ. ೧ ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ ವಿಳಾಸ ತಿತಿತಿ.bಛಿತಿಜ. ಞಚಿಡಿಟಿಚಿಣಚಿಞಚಿ. gov.iಟಿನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.