ಮಡಿಕೇರಿ, ಮಾ. ೨೧: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡುವ ಪ್ರಭಾಕರ ಕಲ್ಲೂರಾಯ ವಾರ್ಷಿಕ ದತ್ತಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ೨೫ ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಸ್ಮರಣಿಕೆಯನ್ನು ಹೊಂದಿದ್ದು, ಏ. ೩೦ ರಂದು ಕೇರಳದ ಕೊಚ್ಚಿನ್ ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ತಿಳಿಸಿದ್ದಾರೆ.