*ಗೋಣಿಕೊಪ್ಪಲು, ಮಾ. ೨೧: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಕೃಷ್ಣಪ್ಪ ಬೆಳ್ಳೂರು ನೇತೃತ್ವದಲ್ಲಿ ತಿತಿಮತಿ, ಬಾಳೆಲೆ ಜಂಕ್ಷನ್ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.