ನಾಪೋಕ್ಲು, ಮಾ. ೨೧: ೨೩ನೇ ಕೊಡವ ಕೌಟುಂಬಿಕ ಹಾಕಿ ಉತ್ಸವದ ಹಿನ್ನೆಲೆ ಕ್ರೀಡಾಕೂಟಕ್ಕೆ ಪೂರಕವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇಲ್ಲಿಗೆ ಸಮೀಪದ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಜನಪರ ಸೇವೆಯನ್ನು ನಡೆಸಿತು.

ಕಾವೇರಿ ಸೇತುವೆಯ ಬಳಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣವರೆಗೆ ಮುಖ್ಯರಸ್ತೆಯ ಬದಿಯಲ್ಲಿರುವ ತ್ಯಾಜ್ಯ, ಕಸ ಕಡ್ಡಿಗಳನ್ನು ಸಂಗ್ರಹಿಸಿ ತೆರವುಗೊಳಿಸಲಾಯಿತು. ಈ ಸಂದರ್ಭ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆಯ ಅಧ್ಯಕ್ಷ ಕಾಳೆಯಂಡ ಸಾಬ ತಿಮ್ಮಯ್ಯ, ಉಪಾಧ್ಯಕ್ಷ ಮಿಟ್ಟು ಸೋಮಯ್ಯ ಹಾಗೂ ೩೪ ಮಂದಿ ಸದಸ್ಯರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಈ ಸೇವಾ ಕಾರ್ಯಕ್ಕೆ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.