ಕೂಡಿಗೆ, ಮಾ. ೨೧ : ಚಿಕ್ಕತ್ತೂರು, ದೊಡ್ಡತ್ತೂರು, ಸುಂದರನಗರ ಗ್ರಾಮಗಳ ಸಾರ್ವಜನಿಕ ಆಟದ ಮೈದಾನ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಾಣಗೊಂಡ ಆಟದ ಮೈದಾನವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಕ್ರೀಡೆಯಲ್ಲಿ ಸಾಧನೆಗೈಯಲು ಇಂತಹ ಸಾರ್ವಜನಿಕ ಆಟ ಮೈದಾನ ಸಹಕಾರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಅಗಮಿಸಿದ್ದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಆಟದ ಮೈದಾನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆಯಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್ ವಹಿಸಿದ್ದರು.

ಸಾರ್ವಜನಿಕ ಆಟದ ಮೈದಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಪ್ರಾಸ್ತಾವಿಕ ನುಡಿಯಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರೋಹಿತ್, ಗ್ರಾಮ ಪಂಚಾಯಿತಿ ಸದಸ್ಯ ಸಿ, ಎನ್, ದಿನೇಶ್ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಗಣೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಭಾಗ್ಯ ರವಿ, ಖತೀಜ, ಶಾಲಾ ಮುಖ್ಯೋಪಾಧ್ಯಾಯ ಎಸ್.ಸಿ. ಗೋವಿಂದರಾಜು, ಹೆಚ್ ಆರ್ ಶಶಿಕಲಾ, ಕನ್ನಿಕಾ ಚೌಡೇಶ್ವರಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಕೆ. ನಾಗೇಶ್, ಮೂರು ಗ್ರಾಮಗಳ ಮುಖಂಡರಾದ ರಾಮಣ್ಣರೈ, ಚಂದ್ರಣ್ಣ, ಶೇಖರ್, ರಾಧಾಕೃಷ್ಣ, ಅಪ್ಪಯ್ಯ, ಸುಬ್ರಮಣಿ, ತಾಲೂಕು ಶಿಕ್ಷಣ ಇಲಾಖೆಯ ಸಿಆರ್‌ಪಿ ಲೋಕೇಶ್, ಸೇರಿದಂತೆ ಸಾರ್ವಜನಿಕ ಆಟದ ಮೈದಾನ ಅಭಿವೃದ್ಧಿ ಸಮಿತಿಯ ಆಡಳಿತ ಮಂಡಳಿಯ ಸದಸ್ಯರು ವಿವಿಧ ಮಹಿಳಾ ಘಟಕದ ಅಧ್ಯಕ್ಷರು ಸದಸ್ಯರು ಸೇರಿದಂತೆ ಮೂರು ಗ್ರಾಮಗಳ ನೂರಾರು ಗ್ರಾಮಸ್ಥರು ಮತ್ತಿತರರು ಹಾಜರಿದ್ದರು.