ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ
ಹಾಸನ, ಮಾ. ೨೩: ಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದ ದಿಗಂಬರ ಜೈನಮಠದ ಮುಖ್ಯಸ್ಥ ಹಾಗೂ ಧರ್ಮಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು. ೭೪ ವರ್ಷದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಬೆಳಿಗ್ಗೆ ೬.೩೦ರ ಸುಮಾರಿಗೆ ಬೆಳಗಿನ ವಾಕಿಂಗ್ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ. ಸ್ವಾಮೀಜಿಯವರನ್ನು ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ. ಚಾರುಕೀರ್ತಿಗೆ ದೇಶ ವಿದೇಶಗಳಲ್ಲಿ ಲಕ್ಷಾಂತರ ಭಕ್ತರಿದ್ದಾರೆ. ಇಲ್ಲಿಯವರೆಗೆ ೧೨ ವರ್ಷಗಳಿಗೊಮ್ಮೆ ನಡೆಯುವ ೪ ಮಹಾಮಸ್ತಕಾಭಿಷೇಕಗಳ ನೇತೃತ್ವ ವಹಿಸಿದ್ದಾರೆ. ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಲು ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾAಧಿ ಸ್ವಾಮೀಜಿ ಅವರಿಗೆ ‘ಕರ್ಮಯೋಗಿ' ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ಗುರುವಾರ ಸಂಜೆ ಜೈನ ಸಂಪ್ರದಾಯದAತೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಿತು.
ಮೀಸಲಾತಿ : ಮಧ್ಯಂತರ ಆದೇಶ ತೆರವು
ಬೆಂಗಳೂರು, ಮಾ. ೨೩: ಲಿಂಗಾಯತ ಪಂಚಮಸಾಲಿಗೆ ೨ಸಿ, ೨ಡಿ ಮೀಸಲಾತಿ ಸಂಬAಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ೨ ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬವರು ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆಗೆ ಸಂಬAಧಿಸಿದAತೆ ಪ್ರವರ್ಗ ೨ಎ ಸೇರ್ಪಡೆ ಮಾಡುವ ಅಥವಾ ೨ಸಿ, ೨ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು. ಇದೀಗ ೨ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ ೨ಸಿ, ೨ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲದಂತಾಗಿದೆ.
ಸಾರಿಗೆ ನೌಕರರ ಮುಷ್ಕರಕ್ಕೆ ತಡೆ
ಬೆಂಗಳೂರು, ಮಾ. ೨೩: ಸಾರಿಗೆ ನೌಕರರ ವೇತನ ಶೇ. ೧೫ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ತಾ. ೨೪ ರ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ. ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರನ್ನು ಪ್ರಶ್ನಿಸಿ ಹೆಚ್.ಎಂ. ವೆಂಕಟೇಶ್ ಎಂಬವರು ಹೈಕೋರ್ಟ್ಗೆ ಪಿಐಎಲ್ ಹಾಕಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ.
ಹೆಚ್ಚಾದ ಕೋವಿಡ್ ಪ್ರಕರಣಗಳ ಸಂಖ್ಯೆ : ಕೇಂದ್ರ ಸರಕಾರ
ನವದೆಹಲಿ, ಮಾ. ೨೩: ದೈನಂದಿನ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಮಧ್ಯೆ, ಕೋವಿಡ್ನಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಅಥವಾ ಸಾವಿನ ಪ್ರಮಾಣದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ ಒಮಿಕ್ರಾನ್ನ ಎಕ್ಸ್ಬಿಬಿ.೧.೧೬ ಸಬ್ವೇರಿಯಂಟ್ ಪ್ರಬಲವಾದ ವೈರಸ್ ಆಗಿರಬಹುದು. ಆದರೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣದಲ್ಲಿ ಅಥವಾ ಸಾವಿನ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಕಂಡುಬAದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸಂಪೂರ್ಣ ಜೀನೋಮ್ ಅನುಕ್ರಮದ ನಂತರ ಕಳೆದ ಮೂರು ತಿಂಗಳಲ್ಲಿ, ಜನವರಿ, ಫೆಬ್ರವರಿ ಮತ್ತು ಮಾರ್ಚ್ನಲ್ಲಿ ೩೪೪ ಮಾದರಿಗಳಲ್ಲಿ ಎಕ್ಸ್ಬಿಬಿ.೧.೧೬ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಹೇಳಿದ್ದಾರೆ.
೧೯ ಸಾವಿರ ಉದ್ಯೋಗಿಗಳ ಕಡಿತಕ್ಕೆ ಆಕ್ಸೆಂಚರ್ ನಿರ್ಧಾರ
ಅಮೇರಿಕ, ಮಾ. ೨೩: ಐಟಿ ದೈತ್ಯ ಆಕ್ಸೆಂಚರ್ ಮುಂಬರುವ ದಿನಗಳಲ್ಲಿ ಒಟ್ಟು ಉದ್ಯೋಗಿಗಳ ಶೇ. ೨.೫ರಷ್ಟು ಅಂದರೆ ೧೯,೦೦೦ದಷ್ಟು ಉದ್ಯೋಗವನ್ನು ಕಡಿಮೆ ಮಾಡಲು ಘೋಷಿಸಿದೆ. ಈ ನಿಟ್ಟಿನಲ್ಲಿ ಕಂಪೆನಿಯು ಹೊರಡಿಸಿದ ಹೇಳಿಕೆಯ ಪ್ರಕಾರ, ಮುಂದಿನ ೧೮ ತಿಂಗಳುಗಳಲ್ಲಿ ಈ ಉಪಕ್ರಮವನ್ನು ಹಂತಹAತವಾಗಿ ಮಾಡಲಾಗುತ್ತದೆ. ಜಗತ್ತಿನ ಮೇಲೆ ಆರ್ಥಿಕ ಹಿಂಜರಿತದ ಭೀತಿಯ ಪರಿಣಾಮ ದೊಡ್ಡ ಕಂಪೆನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯು ನಡೆಯುತ್ತಿದೆ. ಈ ಅನುಕ್ರಮದಲ್ಲಿ, ಮತ್ತೊಂದು ದೊಡ್ಡ ವಜಾಗೊಳಿಸುವಿಕೆ ನಡೆಯುತ್ತಿದೆ. ಐಟಿ ವಲಯದ ಪ್ರಮುಖ ಕಂಪೆನಿಯಾದ ಅಕ್ಸೆಂಚರ್ ೧೯,೦೦೦ ಉದ್ಯೋಗಿಗಳನ್ನು ಕಡಿತಗೊಳಿಸುವುದಾಗಿ ಇಂದು ಘೋಷಿಸಿದೆ. ಇದರೊಂದಿಗೆ, ಕಂಪೆನಿಯು ತನ್ನ ಫಲಿತಾಂಶಗಳಲ್ಲಿ ವಾರ್ಷಿಕ ಆದಾಯದ ಬೆಳವಣಿಗೆ ಮತ್ತು ಲಾಭದ ಅಂದಾಜುಗಳನ್ನು ಕಡಿಮೆ ಮಾಡಿದೆ.
ಸಂಸದೀಯ ನಾಯಕ ಸ್ಥಾನದಿಂದ ಸಂಜಯ್ ವಜಾ
ಮುಂಬೈ, ಮಾ. ೨೩: ಮಹಾರಾಷ್ಟç ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ವಜಾಗೊಳಿಸಿದೆ ಮತ್ತು ಸಂಸದ ಗಜಾನನ್ ಕೀರ್ತಿಕರ್ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ ನೇಮಕ ಮಾಡಿದೆ. ಶಿವಸೇನೆಯ ಮುಖ್ಯ ನಾಯಕರಾಗಿರುವ ಶಿಂಧೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಈ ಸಂಬAಧ ಪತ್ರ ಬರೆದಿದ್ದು, ಕೀರ್ತಿಕರ್ ಅವರನ್ನು ಶಿವಸೇನೆಯ ಸಂಸದೀಯ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟçದಲ್ಲಿ ಕರ್ನಾಟಕ ಸಿಎಂಗೆ ಅವಮಾನ
ಬೆಳಗಾವಿ, ಮಾ. ೨೩: ಮಹಾರಾಷ್ಟçದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಪಮಾನ ಮಾಡಲಾಗಿದೆ. ಕರ್ನಾಟಕ ಸರ್ಕಾರ ವಿರುದ್ಧ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಎಂಎಲ್ಸಿ ಮನೀಷಾ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಮಹಾರಾಷ್ಟç ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ವೇಳೆ ಮಾತನಾಡಿರುವ ಎಂಎಲ್ಸಿ ಡಾ. ಮನಿಷಾ ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿಯ ದಾದಾಗಿರಿ ಹೆಚ್ಚಾಗಿದೆ. ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿ, ಮರಾಠಿ ಮಾತನಾಡಲು ಬಿಡುತ್ತಿಲ್ಲ. ಗಡಿಭಾಗದ ೮೬೫ ಹಳ್ಳಿಗಳಿಗೆ ಕೇವಲ ರೂ. ೫೪ ಕೋಟಿ ವೆಚ್ಚದಲ್ಲಿ ಆರೋಗ್ಯ ಯೋಜನೆ ನೀಡಲಾಗಿದೆ. ಉಭಯ ರಾಜ್ಯಗಳಲ್ಲಿ ಒಂದೇ ಪಕ್ಷದ ಸರ್ಕಾರ ಇದೆ. ನಾವು ನಮ್ಮ ಜನರಿಗೆ ಅನುದಾನ ನೀಡುತ್ತಿದ್ದೇವೆ. ಅದನ್ನು ಪ್ರಶ್ನೆ ಮಾಡಲು ಕರ್ನಾಟಕ ಸಿಎಂಗೆ ಎಷ್ಟು ಧೈರ್ಯ ಇದೆ? ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇನ್ನು ಬಾಕಿ ಇದೆ. ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟç ಸರ್ಕಾರ ತಕ್ಕ ಉತ್ತರ ನೀಡಬೇಕು ಎಂದು ಹೇಳಿದ್ದಾರೆ. ಕರ್ನಾಟಕದ ಗಡಿಭಾಗದಲ್ಲಿರುವ ೮೬೫ ಹಳ್ಳಿಗಳಿಗೆ ರೂ. ೫೪ ಕೋಟಿ ವೆಚ್ಚದಲ್ಲಿ ಮಹಾರಾಷ್ಟç ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಹೇಳಿದ್ದರು.