ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ

ಬೆಂಗಳೂರು, ಮಾ. ೨೪: ರಾಜ್ಯ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ. ಇಂದು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ ಎಂದರು. ಗುಂಪು ಒಂದರಲ್ಲಿ ಆದಿಜಾಂಬವ ಸಮುದಾಯಕ್ಕೆ ಶೇ. ೬ರಷ್ಟು ಮೀಸಲಾತಿ, ಗುಂಪು ೨ ರಲ್ಲಿ ಆದಿಕರ್ನಾಟಕ ಸಮುದಾಯಕ್ಕೆ ಶೇ. ೫.೫ರಷ್ಟು ಮೀಸಲಾತಿ, ಗುಂಪು ೩ರಲ್ಲಿ ಬಂಜಾರ, ಬೋವಿ, ಕೊರಚರಿಗೆ ಶೇ. ೪.೫ರಷ್ಟು ಮೀಸಲಾತಿ, ಗುಂಪು ೪ರಲ್ಲಿರುವ ಮತ್ತಿತರರಿಗೆ ಶೇ. ೧ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳ ಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು. ೨ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸ ಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅಡಿಯಲ್ಲಿ ಮೀಸಲಾತಿ ನೀಡಲಾಗುವುದು. ೨ ಸಿ ಅಡಿ ಒಕ್ಕಲಿಗರಿಗೆ ಶೇ. ೬ ಹಾಗೂ ೨ ಡಿ ಅಡಿ ಲಿಂಗಾಯತರಿಗೆ ಶೇ. ೭ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ : ರಾಹುಲ್

ನವದೆಹಲಿ, ಮಾ. ೨೪: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ತಿಳಿಸಿದ್ದಾರೆ.

ವರುಣಾ ಕ್ಷೇತ್ರದಿಂದ ಸ್ಪರ್ಧೆ - ಸಿದ್ದರಾಮಯ್ಯ

ಚಿತ್ರದುರ್ಗ, ಮಾ. ೨೪: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಹೇಳಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಆಹ್ವಾನ ನೀಡಿರುವುದಕ್ಕೆ ಸಂಬAಧಿಸಿದAತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಇಲ್ಲಿನ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ ೨೫ ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವುದು ಸೂಕ್ತ ಎಂಬುದಾಗಿ ಕುಟುಂಬ ಅಭಿಪ್ರಾಯಪಟ್ಟಿದೆ. ಮತ್ತೊಂದು ಕ್ಷೇತ್ರದಲ್ಲಿಯೂ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾ ಟಿಕೆಟ್ ಅಂತಿಮಗೊಳಿಸುವAತೆ ಪಕ್ಷಕ್ಕೆ ತಿಳಿಸಿದ್ದೇನೆ. ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ

ಬೆಂಗಳೂರು, ಮಾ. ೨೪: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಉಪಾಹಾರ ಸೇವಿಸಿದ ಬಳಿಕ ಬಿಜೆಪಿ ನಾಯಕರು ವಿಧಾನಸಭೆ ಚುನಾವಣೆಗೆ ಸಂಬAಧಿಸಿದAತೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದ್ದರು. ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾ. ೨೬ ರಂದು ಅನಾವರಣಗೊಳಿಸಲಿದ್ದಾರೆ. ಬಳಿಕ ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದ್ದು, ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಕ್ಷಾ ವಿಶ್ವವಿದ್ಯಾಲಯ ಸ್ಥಾಪನೆ ; ಒಡಂಬಡಿಕೆಗೆ ಸಹಿ

ಬೆಂಗಳೂರು, ಮಾ. ೨೪: ರಾಷ್ಟಿçÃಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟಿçÃಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿ ಕೊಂಡಿವೆ. ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವಆರಗ ಜ್ಞಾನೇಂದ್ರ ರವರ ಉಪಸ್ಥಿತಿಯಲ್ಲಿ, ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್. ಪಟೇಲ್ ಹಾಗೂ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಮೂಲಕ ದಕ್ಷಿಣ ಭಾರತದಲ್ಲಿ, ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ ಹೊಂದಿದ ಮೂರನೇ ರಾಜ್ಯ ಕರ್ನಾಟಕವಾಗಿದೆ.

ದೇಶಕ್ಕೆ ಮಾದರಿಯಾದ ಡಿಜಿಟಲ್ ಹೆಲ್ತ್ ಕ್ಲಿನಿಕ್ ಆರಂಭ

ರಾಮನಗರ, ಮಾ. ೨೪: ಇಡೀ ದೇಶಕ್ಕೇ ಮಾದರಿ ಎನ್ನಬಹುದಾದ ರೂ. ೧೨ ಕೋಟಿ ವೆಚ್ಚದಲ್ಲಿ ಮಾಗಡಿ ತಾಲೂಕಿನ ಸಂಕೀಘಟ್ಟ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಮತ್ತು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, ವರ್ಚುಯಲ್ ಸ್ಮಾರ್ಟ್ ಕ್ಲಿನಿಕ್ ವ್ಯವಸ್ಥೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ರಾಜ್ಯದಲ್ಲಿ ಎಲ್ಲೂ ಇಲ್ಲ. ರಾಜೀವ್ ಗಾಂಧಿ ಆರೋಗ್ಯ ವಿ.ವಿ.ಯು ಈ ಆಸ್ಪತ್ರೆಗೆ ೯.೫೦ ಕೋಟಿ ರೂ. ನೀಡಿದೆ. ಜೊತೆಗೆ ಆರ್.ವಿ. ಶಿಕ್ಷಣ ಸಂಸ್ಥೆಗಳ ಸಮೂಹ ಮತ್ತು ಯುನೈಟೆಡ್ ವೇ ಸಂಸ್ಥೆಗಳ ಮೂಲಕ ರೂ. ೩ ಕೋಟಿ ಮೌಲ್ಯಕ್ಕೂ ಹೆಚ್ಚಿನ ಸಾಧನ ಸಲಕರಣೆಗಳು ಹಾಗೂ ಇ-ಆಸ್ಪತ್ರೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಅಮಿಷ ತಡೆಗೆ ಚುನಾವಣಾ ಆಯೋಗ ಕಾರ್ಯತಂತ್ರ

ಬೆAಗಳೂರು, ಮಾ. ೨೪: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮಿಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ದೂರುಗಳ ಸ್ವೀಕರಿಸಲು ನಿಯಂತ್ರಣ ಕೊಠಡಿಯನ್ನು ತೆರೆದಿದೆ. ೨೦೨೩ ರ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ನಡವಳಿಕೆಯನ್ನು ಹಾಳುಮಾಡಲು ಬಳಸಲಾಗುವ ನಗದು, ಚಿನ್ನಾಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಸಾಗಣೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವ ಜವಾಬ್ದಾರಿಯನ್ನು ಐಟಿ ಇಲಾಖೆಯ ವಿಭಾಗಕ್ಕೆ ಭಾರತೀಯ ಚುನಾವಣಾ ಆಯೋಗಕ್ಕೆ ನೀಡಿದೆ. ದೂರು ನೀಡುವವರು ಟೋಲ್ ಫ್ರೀ ಸಂಖ್ಯೆ ೧೮೦೦-೪೨೫ -೨೧೧೫/ ೦೮೦-೨೨೮೬೧೧೨೬, ಫ್ಯಾಕ್ಸ್ ಸಂಖ್ಯೆ ೦೮೦-೨೨೮೬೬೯೧೬, ಮೊಬೈಲ್ ಸಂಖ್ಯೆಗಳು ೮೨೭೭೪೨೨೮೨೫/ ೮೨೭೭೪೧೩೬೧೪, ಇ-ಮೇಲ್ ಛಿಟeಚಿಟಿಞಚಿಡಿಟಿಚಿಣಚಿಞಚಿeಟeಛಿಣioಟಿ @iಟಿಛಿomeಣಚಿx.gov.iಟಿ ಮೂಲಕ ದೂರು ನೀಡಬಹುದು.

ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ

ನವದೆಹಲಿ, ಮಾ. ೨೪: ಮುಂದಿನ ೬ ತಿಂಗಳಲ್ಲಿ ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸ ಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ. ಈ ಕ್ರಮವು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರವಾದ ದೂರಕ್ಕೆ ಶುಲ್ಕ ವಿಧಿಸುವ ಗುರಿಯನ್ನು ಹೊಂದಿದೆ. ಸರ್ಕಾರಿ ಸ್ವಾಮ್ಯದ ಎನ್‌ಎಚ್‌ಎಐನ ಟೋಲ್ ಆದಾಯವು ಪ್ರಸ್ತುತ ರೂ. ೪೦,೦೦೦ ಕೋಟಿಗಳಷ್ಟಿದೆ ಮತ್ತು ಇದು ೨-೩ ವರ್ಷಗಳಲ್ಲಿ ರೂ. ೧.೪೦ ಲಕ್ಷ ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ.

ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ

ಮೈಸೂರು, ಮಾ. ೨೪: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ ನೀಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ವಿರುದ್ಧ ಒಕ್ಕಲಿಗ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ರಂಗಾಯಣಕ್ಕೆ ಮುತ್ತಿಗೆ ಹಾಕಿದ್ದಲ್ಲದೆ ಸಂಜೆ ಅಡ್ಡಂಡ ಕಾರ್ಯಪ್ಪ ಭಾವಚಿತ್ರಕ್ಕೆ ಚಪ್ಪಲಿ ಏಟು ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಥಾನದಿಂದ ಕಾರ್ಯಪ್ಪರನ್ನು ವಜಾ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿತು.