ಸೋಮವಾರಪೇಟೆ, ಮಾ. ೨೩: ಇಲ್ಲಿನ ಮಹಿಳಾ ಸಹಕಾರ ಸಂಘದಲ್ಲಿ ತಾ. ೨೫ರಂದು ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಲೀಲಾ ನಿರ್ವಾಣಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ೧೦.೩೦ಕ್ಕೆ ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷೆ ಸುಮಾ ಸುದೀಪ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಯುರ್ವೇದ ತಜ್ಞ ವೈದ್ಯರಾದ ಕೆ.ಎಸ್. ಶ್ವೇತಾ ಪಾಲ್ಗೊಳ್ಳಲಿದ್ದಾರೆ. ಸಭೆಯ ನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಸಂಘದ ಸದಸ್ಯರಿಗೆ ತಾ. ೨೪ ರಂದು ಮಧ್ಯಾಹ್ನ ೨.೩೦ರಿಂದ ಸಮಾಜದ ಸಭಾಂಗಣದಲ್ಲಿ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.