ವೀರಾಜಪೇಟೆ, ಮಾ. ೨೩: ವೀರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ಸದಸ್ಯರಿಗೆ ಮಹಿಳಾ ದಿನಾಚರಣೆ ಅಂಗವಾಗಿ ತಾ. ೨೫ ರಂದು ಅಪರಾಹ್ನ ೨ ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಟೋಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ, ನಂತರ ಮಹಿಳಾ ಸಮಾಜದಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.