ವೀರಾಜಪೇಟೆ. ಮಾ. ೨೪: ಮಹಿಳಾ ದಿನಾಚರಣೆ ಅಂಗವಾಗಿ ತಾ. ೨೫ ರಂದು (ಇಂದು) ಅಪರಾಹ್ನ ೨ ಗಂಟೆಗೆ ವೀರಾಜಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಟೋಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ, ನಂತರ ಮಹಿಳಾ ಸಮಾಜದಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸ ಲಾಗಿದೆ ಎಂದು ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.