ಮಡಿಕೇರಿ, ಮಾ. ೨೩: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಅಧಿಕಾರಿಗಳು ತಾ. ೨೭ ರಂದು ಸೋಮವಾರಪೇಟೆ ಲೋಕೋಪ ಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಮತ್ತು ತಾ. ೩೧ ರಂದು ಮಡಿಕೇರಿ ಸುದರ್ಶನ ಅತಿಥಿ ಗೃಹದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ರಿಂದ ೧ ಗಂಟೆವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.

ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.