ಕುಶಾಲನಗರ, ಮಾ. ೨೩: ಕುಶಾಲನಗರ ವ್ಯಾಪ್ತಿಯಲ್ಲಿ ನಡೆದ ಆಭರಣ ಕಳ್ಳತನ ಪ್ರಕರಣ ಸಂಬAಧ ಕುಶಾಲನಗರ ಪೊಲೀಸರು ಅಂತರ್ ಜಿಲ್ಲಾ ವ್ಯಕ್ತಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಕೆಲವು ತಿಂಗಳುಗಳ ಹಿಂದೆ ಸ್ಥಳೀಯ ಪ್ರತಿಷ್ಠಿತ ರೆಸಾರ್ಟ್ ಒಂದರಲ್ಲಿ ಪ್ರವಾಸಿಗರ ಕೋಣೆಯಿಂದ ಕಳ್ಳತನವಾಗಿದ್ದ ಸುಮಾರು ೧೫ ಲಕ್ಷ ಮೌಲ್ಯದ ವಜ್ರಾಭರಣಗಳ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೂಚನೆಯಂತೆ ಡಿವೈಎಸ್ಪಿ ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿ ಮಡಿಕೇರಿಯ ಓರ್ವ ವ್ಯಕ್ತಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಇದೇ ರೀತಿಯ ಹಲವು ಪ್ರಕರಣಗಳು ಬೇರೆ ಜಿಲ್ಲೆಗಳಲ್ಲಿ ಕೂಡ ನಡೆದಿದ್ದು ಪೊಲೀಸ್ ಕಾರ್ಯಾಚರಣೆ ತಂಡ ತನಿಖೆ ಮುಂದುವರಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. - ಸಿಂಚು