ಮಡಿಕೇರಿ, ಮಾ.೨೪: ಇದೇ ತಾ. ೩೧ ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ. ನಗರದ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಸಂಬAಧಿಸಿದAತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು.

ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗಾಬರಿ ಉಂಟು ಮಾಡಬಾರದು. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಸೂಚಿಸಿದರು. ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್‌ಗಳು, ತಾಲೂಕು ನೋಡಲ್

(ಮೊದಲ ಪುಟದಿಂದ) ಅಧಿಕಾರಿಗಳು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತಿ ದಳದ ಸಿಬ್ಬಂದಿ, ಇತರರ ಕರ್ತವ್ಯ ನಿರ್ವಹಣೆ ಬಗ್ಗೆ ಸುದೀರ್ಘವಾಗಿ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾತನಾಡಿ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಅವರು ಜಿಲ್ಲೆಯ ೩೧ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೧೫ ಮತ್ತು ವೀರಾಜಪೇಟೆ ತಾಲೂಕಿನಲ್ಲಿ ೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು ೧೭೦ ಶಾಲೆಗಳ ೬,೫೮೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲೂಕಿನ ೪೩ ಶಾಲೆಗಳ ೧,೮೮೬, ಸೋಮವಾರಪೇಟೆ ತಾಲೂಕಿನ ೭೦ ಶಾಲೆಗಳ ೨,೬೧೧ ವಿದ್ಯಾರ್ಥಿಗಳು, ವೀರಾಜಪೇಟೆ ತಾಲೂಕಿನ ೫೭ ಶಾಲೆಯ ೨,೦೯೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬAಧಿಸಿದAತೆ ೩೧ ಮುಖ್ಯ ಅಧೀಕ್ಷಕರು ಮತ್ತು ೩೧ ಕಸ್ಟೋಡಿಯನ್‌ಗಳು, ಮೂರು ತಾಲೂಕು ನೋಡಲ್ ಅಧಿಕಾರಿಗಳು, ೧೫ ಮಾರ್ಗಾಧಿಕಾರಿಗಳು, ೧೫ ಮಾರ್ಗಾಧಿಕಾರಿಗಳಿಗೆ ಅಗತ್ಯವಿರುವ ವಾಹನಗಳು, ೩೧ ಸ್ಥಾನಿಕ ಜಾಗೃತ ದಳದ ಸಿಬ್ಬಂದಿ, ಹಾಗೆಯೇ ೩೧ ಮೊಬೈಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸಿ.ರಂಗಧಾಮಯ್ಯ ಮಾಹಿತಿ ನೀಡಿದ್ದಾರೆ.

ಡಯಟ್ ಪ್ರಾಂಶುಪಾಲರಾದ ಮಲ್ಲೇಶಪ್ಪ, ಪ್ರೊಭೆಷನರಿ ತಹಶೀಲ್ದಾರ್ ರುಕ್ಮಿಣಿ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್(ಮಡಿಕೇರಿ), ಕೆ.ವಿ.ಸುರೇಶ್ (ಸೋಮವಾರಪೇಟೆ), ಶ್ರೀಶೈಲ ಬೀಳಗಿ (ವೀರಾಜಪೇಟೆ), ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸದಾಶಿವ ಪಲ್ಲೇದ್, ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ವಿವಿಧ ಹಂತದ ಅಧಿಕಾರಿಗಳು ಇದ್ದರು.