ಗೋಣಿಕೊಪ್ಪಲು, ಮಾ. ೨೪: ಕೊಡಗಿನಲ್ಲಿ ಕಾಂಗ್ರೆಸ್ ಪರ ಅಲೆ ಹೆಚ್ಚಾಗಿದ್ದು ಈ ಬಾರಿ ಕೊಡಗಿನ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ನ ಮಹಿಳಾ ಅಧ್ಯಕ್ಷೆ ಡಾ. ಪುಷ್ಪ ಅಮರ್‌ನಾಥ್ ಅಭಿಪ್ರಾಯಪಟ್ಟರು.
ಪೊನ್ನಂಪೇಟೆಯ ಕೊಡವ ಸಮಾಜದಲ್ಲಿ ಆಯೋಜನೆಗೊಂಡಿದ್ದ ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇ. ೫೦ ಮೀಸಲಾತಿಯನ್ನು ರಾಜಕೀಯ ಕ್ಷೇತ್ರದಲ್ಲಿ ನೀಡಿದೆ. ಇದರಿಂದ ಮಹಿಳೆಯರು ರಾಜಕೀಯ ಅಧಿಕಾರವನ್ನು ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಹಲವು ಯೋಜನೆಗಳನ್ನು ಮಹಿಳೆಯರ ಪರವಾಗಿ ಘೋಷಣೆ ಮಾಡಿದೆ. ಇದರ ಪ್ರಯೋಜನ ಪ್ರತಿಯೊಬ್ಬ ಮಹಿಳೆಯರಿಗೂ ದೊರಕಲಿದೆ ಎಂದರು.
ಪೊನ್ನAಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಕೋಳೆರ ಭಾರತಿ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ, ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಮಾತನಾಡಿ, ಕ್ಷೇತ್ರದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಬದಲಾವಣೆ ಖಚಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಆಶಾಭಾವನೆ ವ್ಯಕ್ತ ಪಡಿಸಿದರು. ಈಗಾಗಲೇ ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ ಆಶಾಭಾವನೆ ವ್ಯಕ್ತ ಪಡಿಸಿದರು. ಈಗಾಗಲೇ ಕ್ಷೇತ್ರದ ಅಭಿವೃದ್ಧಿ ದೃಷ್ಠಿಯಿಂದ
(ಮೊದಲ ಪುಟದಿಂದ) ೨೪ ಪ್ರಣಾಳಿಕೆಯನ್ನು ಬಿಡುಗಡೆ ಗೊಳಿಸಲಾಗಿದೆ ಎಂದು ವಿವರಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಹಲವು ಸೂಕ್ತ ಸ್ಥಾನಮಾನಗಳನ್ನು ನೀಡಿದೆ. ಇದರಲ್ಲಿ ಕೊಡಗಿನ ಮಹಿಳೆಯರಿಗೆ ಹೆಚ್ಚಿನ ಸ್ಥಾನ ಲಭಿಸಿದೆ. ಇದರಲ್ಲಿ ಮಹಿಳೆಯಾಗಿ ತಾನೂ ಕೂಡ ರಾಜಕೀಯ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ವರ್ಗದ ಜನರನ್ನು ಸಮಾನಾಗಿ ನೋಡುವ ಅವಕಾಶವಿದೆ. ಪಕ್ಷಕ್ಕೆ ದುಡಿದವರನ್ನು ಉತ್ತಮ ರೀತಿಯಲ್ಲಿ ಪಕ್ಷವು ನಡೆಸಿಕೊಳ್ಳಲಿದೆ ಎಂದರು.
ಮಾಜಿ ವಿಧಾನಸಭಾ ಸದಸ್ಯ ಚೆಪ್ಪುಡೀರ ಎಸ್. ಅರುಣ್ ಮಾಚಯ್ಯ ಮಾತನಾಡಿ, ಕ್ಷೇತ್ರದಲ್ಲಿ ಇಲ್ಲಿ ತನಕ ನಡೆದ ಸಮಾವೇಶಗಳು ಅತ್ಯಂತ ಯಶಸ್ವಿಯಾಗಿ ಜರುಗಿವೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಅಭ್ಯರ್ಥಿಯಾದ ಪೊನ್ನಣ್ಣನವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವರನ್ನು ಆರಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕೊಡಗು ಜಿಲ್ಲೆಯ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಂಘಟನೆ ಉತ್ತಮವಾಗಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಕೋಳೇರ ಭಾರತಿ, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ರಾಜೇಶ್ವರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ, ವೀರಾಜಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪೊನ್ನಕ್ಕಿ ಸೇರಿದಂತೆ ಇನ್ನಿತರ ಪ್ರಮುಖರು ಸಭೆಯಲ್ಲಿ ಮಾತನಾಡಿದರು.ವೇದಿಕೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ರಾಜ್ಯ ಸೇವಾದಳದ ಕಾರ್ಯದರ್ಶಿ ತೆರೆಸ ವಿಕ್ಟರ್, ಒಬಿಸಿ ಜಿಲ್ಲಾಧ್ಯಕ್ಷ ಬಿ.ಎನ್. ಪ್ರಥ್ವಿ, ಜಿಲ್ಲಾ ವಕ್ತಾರ ಆಪಟ್ಟೀರ ಟಾಟು ಮೊಣ್ಣಪ್ಪ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕರ್ತಮಾಡ ರಮ್ಯ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಸಮಾವೇಶದ ಅಂಗವಾಗಿ ಪೊನ್ನಂಪೇಟೆ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜ್ಯ ಕಾಂಗ್ರೆಸ್‌ನ ಮಹಿಳಾ ಅಧ್ಯಕ್ಷೆಯಾಗಿರುವ ಡಾ. ಪುಷ್ಪ ಅಮರ್‌ನಾಥ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಮುಖಂಡರಾದ ಸಾಜಿ ಅಚ್ಚುತ್ತನ್ ಸ್ವಾಗತಿಸಿ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ರೇವತಿ ವಂದಿಸಿ, ಡಾ. ಕಾವೇರಿ ನಿರೂಪಿಸಿದರು.