ವೀರಾಜಪೇಟೆ, ಮಾ. ೨೩: ತಾಲೂಕು ಬಂಟರ ಸಂಘದ ಅಧ್ಯಕ್ಷ ಬಿ.ಎಂ. ದುಶ್ಯಂತ್ ರೈ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಬಂಟರ ಸಂಘದ ಮಹಾಸಭೆ ತಾ. ೨೬ ರಂದು ಪಟ್ಟಣದ ಗೋಣಿಕೊಪ್ಪಲು ರಸ್ತೆಯಲ್ಲಿನ ಮಂಜುನಾಥ ಹೊಟೇಲ್ನಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯಕಾರಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಿಗ್ಗೆ ೧೦:೩೦ಕ್ಕೆ ನಡೆಯಲಿರುವ ಮಹಾಸಭೆಯಲ್ಲಿ ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.