ಮಡಿಕೇರಿ, ಮಾ. ೨೪: ಕೊಡಗು ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆ ಸರಹದ್ದಿನಲ್ಲಿ ತಾ. ೪.೬.೨೦೨೨ ರಿಂದ ತಾ. ೩.೩.೨೦೨೩ರವರೆಗೆ ಒಟ್ಟು ೨೨ ಪ್ರಕರಣಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ೬೦ ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು ೨೬.೭೫೦ ಕೆ.ಜಿ. ಗಾಂಜಾ ಹಾಗೂ ೧.೧೬೧ ಕೆ.ಜಿ. ಹಶಿಶ್ ಆಯಿಲ್‌ಗಳನ್ನು ವಶಪಡಿಸಿ ಕೊಳ್ಳುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡಿರುವ ನಿಷೇಧಿತ ಮಾದಕ ವಸ್ತುಗಳನ್ನು ನಾಶಪಡಿಸುವ ಸಲುವಾಗಿ ಘನ ನ್ಯಾಯಾಲಯದಿಂದ ಅನುಮತಿ ಪಡೆದು ತಾ. ೨೪ ರಂದು ಮೈಸೂರು ಜಿಲ್ಲೆಯ ಗುಜ್ಜೆಗೌಡನಪುರ ಗ್ರಾಮದಲ್ಲಿ ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಡ್ರಗ್ ಡಿಸ್ಪೋಸಲ್ ಸಮಿತಿ ಸದಸ್ಯರ ಸಮ್ಮುಖದಲ್ಲಿ ನಾಶಪಡಿಸಲಾಗಿದೆ.

ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹ ಕರಿಸುವಂತೆ ಪೊಲೀಸ್ ವರಿಷ್ಠಾಧಿ ಕಾರಿ ಕೆ. ರಾಮರಾಜನ್ ಕೋರಿದ್ದಾರೆ.