(ಕೆ.ಎಂ ಇಸ್ಮಾಯಿಲ್ ಕಂಡಕರೆ)

ಮಡಿಕೇರಿ, ಮಾ. ೨೪: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿದೆ. ಕೊಡಗು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುದು ಇನ್ನೂ ಕೂಡ ಪ್ರಕಟಗೊಂಡಿಲ್ಲ.

ಕ್ಷೇತ್ರ ಪುನರ್ವಿಂಗಡಣೆಗೊAಡ ಬಳಿಕ ಸತತವಾಗಿ ಹ್ಯಾಟ್ರಿಕ್ ಗೆಲುವು ದಾಖಲಿಸಿಕೊಂಡು ಬರುತ್ತಿರುವ ಬಿಜೆಪಿಯ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಈ ಬಾರಿಯೂ ಕೂಡ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

ಜಿಲ್ಲೆಯಲ್ಲಿ ಕೊಂಚ ಮಟ್ಟಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಶಾಸಕದ್ವಯರು ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವ ಅಚಲ ವಿಶ್ವಾಸದಲ್ಲಿದ್ದಾರೆ.

ಕಳೆದ ಬಾರಿ ಇಬ್ಬರು ಶಾಸಕರಿಗೆ ಕೂಡ ದೊಡ್ಡ ಮಟ್ಟದ ವಿರೋಧ ಬಿಜೆಪಿ ಪಕ್ಷದಲ್ಲೇ ಕಂಡುಬAದಿತ್ತು. ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೂ ಕೂಡ ಇಬ್ಬರು ಶಾಸಕರು ದೊಡ್ಡ ಅಂತರದಲ್ಲಿ ಗೆದ್ದು ಪಕ್ಷದಲ್ಲೇ ಇರುವ ವಿರೋಧಿಗಳಿಗೆ ಗಟ್ಟಿ ಉತ್ತರ ನೀಡಿದ್ದರು.

ಕಳೆದ ಎರಡು ದಶಕಗಳಿಂದ ಕೊಡಗು ಜಿಲ್ಲೆಯನ್ನು ಬಿಜೆಪಿ ಭದ್ರಕೋಟೆ ಮಾಡುವಲ್ಲಿ ಶಾಸಕರ ಕೊಡುಗೆ ಅಪಾರವಾಗಿದೆ. ಈ ಬಾರಿ ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಬೇಕೆಂಬ ಕೂಗು ಒಳಗೊಳಗೆ ಕೇಳಿಬರುತ್ತಿದೆ.

ಹೊಸ ಮುಖಕ್ಕೆ ಬಿಜೆಪಿ ಟಿಕೆಟ್ ನೀಡಿದರೆ ಈ ಬಾರಿ ಗೆಲುವು ಕಷ್ಟಸಾಧ್ಯವಾಗಲಿದೆ ಎಂದು ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಕಳೆದ ವಾರ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮತ್ತೊಮ್ಮೆ ಶಾಸಕರಿಗೆ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಅವಕಾಶ ನೀಡಬೇಕೆಂಬ ಹೇಳಿಕೆ ನೀಡುವ ಮೂಲಕ ಈ ಬಾರಿ ಕೂಡ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂಬ ಸಂದೇಶವನ್ನು ಪರೋಕ್ಷವಾಗಿ ನೀಡಿದ್ದರು.

ಐದು ಬಾರಿ ಗೆಲುವು ಕಂಡಿರುವ ಅಪ್ಪಚ್ಚು ರಂಜನ್!

ಆರು ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಒಂದು ಬಾರಿ ಮಾತ್ರ ಸೋಲು ಕಂಡಿರುವ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಐದು ಬಾರಿ ಗೆಲುವು ಸಾಧಿಸಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆಗೊAಡ ಬಳಿಕ ಹ್ಯಾಟ್ರಿಕ್ ಗೆಲುವು ಸಾಧಿಸಿಕೊಂಡು ಬರುತ್ತಿರುವ ಅಪ್ಪಚ್ಚು ರಂಜನ್ ಅವರು ಪ್ರತೀ ಚುನಾವಣೆಯಲ್ಲೂ ತಮ್ಮ ಗೆಲುವಿನ ಅಂತರವನ್ನು ಹೆಚ್ಚಿಸುತ್ತಾ ಬಂದಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಯಲ್ಲೂ ಕೂಡ ಬಿ.ಎ. ಜೀವಿಜಯ ಅವರು ರಂಜನ್ ಅವರ ಎದುರಾಳಿಯಾಗಿದ್ದಾರೆ.

ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಬಿಗ್ ಫೈಟ್ ನಡೆಯುವುದು ನಿಶ್ಚಿತವಾಗಿದೆ.

ಕಾಂಗ್ರೆಸ್ ಪಕ್ಷದಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಸೇರಿರುವ ಬಿ.ಎ. ಜೀವಿಜಯ ಹಾಗೂ ಡಾ. ಮಂಥರ್ ಗೌಡ ಹೆಸರಿದ್ದರೂ, ಬಹುತೇಕರ ಒಲವು ಮಂಥರ್ ಗೌಡರತ್ತ ಎಂದು ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗಗೊAಡಿದೆ. ಬಿಜೆಪಿ ಪಕ್ಷದಿಂದ ಮಡಿಕೇರಿ ಕ್ಷೇತ್ರದಲ್ಲಿ ಸಂಘ ಪರಿವಾರದ ಬೆಂಬಲವಿರುವ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಒಕ್ಕಲಿಗ ಗೌಡ ಸಮುದಾಯದ ಬಿ.ಬಿ. ಭಾರತೀಶ್ ಅವರಿಗೆ ಅವಕಾಶ ನೀಡಿ ಎಂಬ ಕೂಗೂ ಪಕ್ಷದೊಳಗೇ ಕೇಳಿಬರುತ್ತಿದೆ.

ಮಡಿಕೇರಿ ಕ್ಷೇತ್ರದಲ್ಲಿ ಅತೀ ಹೆಚ್ಚು ಗೌಡ ಸಮುದಾಯದ ಮತದಾರರು ಇದ್ದು, ಈ ಬಾರಿ ಬಿಜೆಪಿಯಲ್ಲಿ ಗೌಡ ಸಮುದಾಯದ ಪ್ರತಿನಿಧಿಗೆ ಟಿಕೆಟ್ ನೀಡಿ, ವೀರಾಜಪೇಟೆ ಕ್ಷೇತ್ರದಲ್ಲಿ ಕೊqವಿಧಾನಸಭಾ ಚುನಾವಣೆ: ಟಿಕೆಟ್ ನಿರೀಕ್ಷೆಯಲ್ಲಿ ಶಾಸಕದ್ವಯರು!..

ಮಡಿಕೇರಿ ಕ್ಷೇತ್ರದಲ್ಲಿ ಅತೀ ಹೆಚ್ಚು ಗೌಡ ಸಮುದಾಯದ ಮತದಾರರು ಇದ್ದು, ಈ ಬಾರಿ ಬಿಜೆಪಿಯಲ್ಲಿ ಗೌಡ ಸಮುದಾಯದ ಪ್ರತಿನಿಧಿಗೆ ಟಿಕೆಟ್ ನೀಡಿ, ವೀರಾಜಪೇಟೆ ಕ್ಷೇತ್ರದಲ್ಲಿ ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಬಿಜೆಪಿ ಪಕ್ಷದಲ್ಲಿ ಕೇಳಿಬರುತ್ತಿದೆ.

ಕೊಡವ ಅಭ್ಯರ್ಥಿಯ ಕೂಗು!

ವೀರಾಜಪೇಟೆ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಯಿಂದ ಗೆಲುವು ಸಾಧಿಸುತ್ತಾ ಬಂದಿರುವ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಮತ್ತೊಮ್ಮೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ.

ಕಳೆದ ಬಾರಿ ದೊಡ್ಡ ಮಟ್ಟದ ವಿರೋಧವನ್ನು ಸ್ವಪಕ್ಷೀಯದವರಿಂದಲೇ ಕಟ್ಟಿಕೊಂಡ ಕೆ.ಜಿ. ಬೋಪಯ್ಯ ೧೩ ಸಾವಿರಕ್ಕೂ ಅಧಿಕ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ವೀರಾಜಪೇಟೆ ಕ್ಷೇತ್ರದಲ್ಲಿ ಸಂಘ ಪರಿವಾರದ ದೊಡ್ಡ ಬೆಂಬಲವೇ ಕೆ.ಜಿ.ಬಿ. ಅವರ ಬಲ.

ಕಳೆದ ಚುನಾವಣೆಯಲ್ಲಿ ಕೊನೆಯ ಕ್ಷಣದಲ್ಲಿ ಟಿಕೆಟ್ ಪಡೆದುಕೊಂಡ ಕೆ.ಜಿ. ಬೋಪಯ್ಯ ಈ ಬಾರಿ ಬಿಜೆಪಿಯ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆಯಾಗುವ ನಿರೀಕ್ಷೆಯಲ್ಲಿ ಇದ್ದಾರೆ. ಕಳೆದ ಮೂರು ಚುನಾವಣೆಗಿಂತ ಈ ಬಾರಿಯ ವೀರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ ಅವರು ಬಿಗ್ ಫೈಟ್ ಎದುರಿಸಬೇಕಾಗುತ್ತದೆ.

ಕಾರಣವೇನೆಂದರೆ ಕಳೆದ ಮೂರು ವರ್ಷಗಳಿಂದ ಕ್ಷೇತ್ರದಾದ್ಯಂತ ಬಿರುಸಿನ ಚಟುವಟಿಕೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಅದಲ್ಲದೇ ಬಿಜೆಪಿಯಿಂದ ಈ ಬಾರಿ ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಪ್ರತೀ ಬಾರಿಯಂತೆ ಈ ಚುನಾವಣೆಯಲ್ಲೂ ಕೇಳಿಬರುತ್ತಿದೆ. ಕಾಂಗ್ರೆಸ್ ಕಳೆದ ಮೂರು ಚುನಾವಣೆಯಲ್ಲಿ ಕೂಡ ವೀರಾಜಪೇಟೆ ಕ್ಷೇತ್ರದಲ್ಲಿ ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾ ಬಂದಿದೆ. ಈ ಬಾರಿ ಕೂಡ ಕೊಡವ ಸಮುದಾಯಕ್ಕೆ ಸೇರಿದ ಎ.ಎಸ್. ಪೊನ್ನಣ್ಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಗೌಡ ಸಮುದಾಯಕ್ಕೆ ಸೇರಿರುವ ಶಾಸಕ ಕೆ.ಜಿ. ಬೋಪಯ್ಯ ಅತೀ ಹೆಚ್ಚು ಕೊಡವ ಮತದಾರರು ಇರುವ ವೀರಾಜಪೇಟೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಾಂತೆಯAಡ ರವಿ ಕುಶಾಲಪ್ಪ, ಪಟ್ಟಡ ರೀನಾ ಪ್ರಕಾಶ್, ತೇಲಪಂಡ ಶಿವಕುಮಾರ್ ನಾಣಯ್ಯ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಬಿಜೆಪಿಯಲ್ಲಿ ಕೇಳಿಬರುತ್ತಿದೆಯಾದರೂ, ಹೊಸ ಮುಖದ ಸ್ಪರ್ಧೆಯಿಂದ ಚುನಾವಣೆ ಎದುರಿಸುವುದು ಕಷ್ಟ ಎಂದು ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಜಿ. ಬೋಪಯ್ಯ ವೀರಾಜಪೇಟೆ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.

ಕೊಡವ ಪ್ರಾಬಲ್ಯವಿರುವ ವೀರಾಜಪೇಟೆ ಕ್ಷೇತ್ರದಲ್ಲಿ ಗೌಡ ಜನಾಂಗದವರನ್ನು, ಗೌಡ ಪ್ರಾಬಲ್ಯವಿರುವ ಮಡಿಕೇರಿ ಕ್ಷೇತ್ರದಲ್ಲಿ ಕೊಡವ ಅಭ್ಯರ್ಥಿಯನ್ನು ಗೆಲ್ಲಿಸಿ, ಕೊಡಗು ಜಾತ್ಯತೀತ ವ್ಯವಸ್ಥೆಯಲ್ಲಿ ನಿಂತಿದೆ ಎಂಬುದನ್ನು ಪ್ರಜ್ಞಾವಂತ ಮತದಾರರು ಇದುವರೆಗೂ ತೋರಿಸಿದ್ದು, ಈ ಬಾರಿಯೂ ಅದೇ ಮಾನಸೀಕತೆ ಪ್ರತಿಬಿಂಬಿಸಲ್ಪಡಲಿದೆಯೇ ಎಂಬುದು ಮಾತ್ರ ಯಕ್ಷ ಪ್ರಶ್ನೆ.Àವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಬಿಜೆಪಿ ಪಕ್ಷದಲ್ಲಿ ಕೇಳಿಬರುತ್ತಿದೆ.

ಕೊಡವ ಅಭ್ಯರ್ಥಿಯ ಕೂಗು!

ವೀರಾಜಪೇಟೆ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಯಿಂದ ಗೆಲುವು ಸಾಧಿಸುತ್ತಾ ಬಂದಿರುವ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಮತ್ತೊಮ್ಮೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ.

ಕಳೆದ ಬಾರಿ ದೊಡ್ಡ ಮಟ್ಟದ ವಿರೋಧವನ್ನು ಸ್ವಪಕ್ಷೀಯದವರಿಂದಲೇ ಕಟ್ಟಿಕೊಂಡ ಕೆ.ಜಿ. ಬೋಪಯ್ಯ ೧೩ ಸಾವಿರಕ್ಕೂ ಅಧಿಕ ಮತಗಳ ಅಂತರದಿAದ ಗೆಲುವು ಸಾಧಿಸಿದ್ದರು. ವೀರಾಜಪೇಟೆ ಕ್ಷೇತ್ರದಲ್ಲಿ ಸಂಘ ಪರಿವಾರದ ದೊಡ್ಡ ಬೆಂಬಲವೇ ಕೆ.ಜಿ.ಬಿ. ಅವರ ಬಲ.

ಕಳೆದ ಚುನಾವಣೆಯಲ್ಲಿ ಕೊನೆಯ ಕ್ಷಣದಲ್ಲಿ ಟಿಕೆಟ್ ಪಡೆದುಕೊಂಡ ಕೆ.ಜಿ. ಬೋಪಯ್ಯ ಈ ಬಾರಿ ಬಿಜೆಪಿಯ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆಯಾಗುವ ನಿರೀಕ್ಷೆಯಲ್ಲಿ ಇದ್ದಾರೆ. ಕಳೆದ ಮೂರು ಚುನಾವಣೆಗಿಂತ ಈ ಬಾರಿಯ ವೀರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ ಅವರು ಬಿಗ್ ಫೈಟ್ ಎದುರಿಸಬೇಕಾಗುತ್ತದೆ.

ಕಾರಣವೇನೆಂದರೆ ಕಳೆದ ಮೂರು ವರ್ಷಗಳಿಂದ ಕ್ಷೇತ್ರದಾದ್ಯಂತ ಬಿರುಸಿನ ಚಟುವಟಿಕೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವುದು ಖಚಿತವಾಗಿದೆ.

ಅದಲ್ಲದೇ ಬಿಜೆಪಿಯಿಂದ ಈ ಬಾರಿ ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಪ್ರತೀ ಬಾರಿಯಂತೆ ಈ ಚುನಾವಣೆಯಲ್ಲೂ ಕೇಳಿಬರುತ್ತಿದೆ. ಕಾಂಗ್ರೆಸ್ ಕಳೆದ ಮೂರು ಚುನಾವಣೆಯಲ್ಲಿ ಕೂಡ ವೀರಾಜಪೇಟೆ ಕ್ಷೇತ್ರದಲ್ಲಿ ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾ ಬಂದಿದೆ. ಈ ಬಾರಿ ಕೂಡ ಕೊಡವ ಸಮುದಾಯಕ್ಕೆ ಸೇರಿದ ಎ.ಎಸ್. ಪೊನ್ನಣ್ಣ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಗೌಡ ಸಮುದಾಯಕ್ಕೆ ಸೇರಿರುವ ಶಾಸಕ ಕೆ.ಜಿ. ಬೋಪಯ್ಯ ಅತೀ ಹೆಚ್ಚು ಕೊಡವ ಮತದಾರರು ಇರುವ ವೀರಾಜಪೇಟೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಾಂತೆಯAಡ ರವಿ ಕುಶಾಲಪ್ಪ, ಪಟ್ಟಡ ರೀನಾ ಪ್ರಕಾಶ್, ತೇಲಪಂಡ ಶಿವಕುಮಾರ್ ನಾಣಯ್ಯ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಕೊಡವ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಬಿಜೆಪಿಯಲ್ಲಿ ಕೇಳಿಬರುತ್ತಿದೆಯಾದರೂ, ಹೊಸ ಮುಖದ ಸ್ಪರ್ಧೆಯಿಂದ ಚುನಾವಣೆ ಎದುರಿಸುವುದು ಕಷ್ಟ ಎಂದು ಬಿಜೆಪಿ ಆಂತರಿಕ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಜಿ. ಬೋಪಯ್ಯ ವೀರಾಜಪೇಟೆ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.

ಕೊಡವ ಪ್ರಾಬಲ್ಯವಿರುವ ವೀರಾಜಪೇಟೆ ಕ್ಷೇತ್ರದಲ್ಲಿ ಗೌಡ ಜನಾಂಗದವರನ್ನು, ಗೌಡ ಪ್ರಾಬಲ್ಯವಿರುವ ಮಡಿಕೇರಿ ಕ್ಷೇತ್ರದಲ್ಲಿ ಕೊಡವ ಅಭ್ಯರ್ಥಿಯನ್ನು ಗೆಲ್ಲಿಸಿ, ಕೊಡಗು ಜಾತ್ಯತೀತ ವ್ಯವಸ್ಥೆಯಲ್ಲಿ ನಿಂತಿದೆ ಎಂಬುದನ್ನು ಪ್ರಜ್ಞಾವಂತ ಮತದಾರರು ಇದುವರೆಗೂ ತೋರಿಸಿದ್ದು, ಈ ಬಾರಿಯೂ ಅದೇ ಮಾನಸೀಕತೆ ಪ್ರತಿಬಿಂಬಿಸಲ್ಪಡಲಿದೆಯೇ ಎಂಬುದು ಮಾತ್ರ ಯಕ್ಷ ಪ್ರಶ್ನೆ.