ನಾಪೋಕ್ಲು, ಮಾ. ೨೫: ಶಾಲೆಯ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೋಜು ಮಸ್ತಿ ಮಾಡಿ ಪರಾರಿಯಾಗಿದ್ದಾರೆ. ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಶಾಲೆಯ ಕೊಠಡಿಯ ಬೀಗ ಒಡೆದು ಒಳನುಗ್ಗಿದ್ದಾರೆ. ಶಾಲೆಗೆ ಮರುದಿನ ಬಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆ ಒಳಾಂಗಣದ ಕೊಠಡಿಯ ಬೀಗ ಒಡೆದಿರುವುದನ್ನು ಗಮನಿಸಿದ್ದು ನಾಪೋಕ್ಲು ಠಾಣೆಗೆ ದೂರು ನೀಡಿದ್ದಾರೆ. ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.