ಕುಶಾಲನಗರ, ಮಾ. ೨೫: ಕುಶಾಲನಗರದ ಮಡಿಕೇರಿ ರಸ್ತೆಯ ಅಮನ್ ವನಾ ರೆಸಾರ್ಟ್ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ವಜ್ರದ ಹರಳುಗಳು ಹಾಗೂ ನಗದು ಕಳ್ಳತನ ಪ್ರಕರಣಕ್ಕೆ ಸಂಬAಧಿಸಿದAತೆ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸಿಪಿಐ ಕುಶಾಲನಗರ ವೃತ್ತದ ಪೊಲೀಸ್ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಅವರು ಕುಶಾಲನಗರ ಡಿವೈಎಸ್‌ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರೆಸಾರ್ಟ್ನಲ್ಲಿ ಕಳೆದ ಅಕ್ಟೋಬರ್ ೧೬ ರಂದು ಪ್ರವಾಸಿಗರು ತಂಗಿದ್ದ ರೂಮ್ ನಲ್ಲಿ ಕಳ್ಳತನ ನಡೆದಿತ್ತು. ಈ ಕುರಿತು ರೆಸಾರ್ಟ್ ಸಿಬ್ಬಂದಿಗಳು ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳವು ಪ್ರಕರಣ

ಪತ್ತೆ ಮಾಡುವ ನಿಟ್ಟಿನಲ್ಲಿ

ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಸಿಪಿಐ ಕುಶಾಲನಗರ ವೃತ್ತದವರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

ಈ ತಂಡ ಕಾರ್ಯಪ್ರವೃತ್ತರಾಗಿ ಕಳ್ಳತನ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ೨ ಪ್ರಕರಣ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೨ ಪ್ರಕರಣ ಸೇರಿ ಒಟ್ಟು ೪ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಬಳಿಯ ಬಂಗ್ಲೆಗುಡ್ಡೆ ನಿವಾಸಿ ಈ ಹಿಂದೆ ಮಡಿಕೇರಿಯ ಚಾಮುಂಡೇಶ್ವರಿ ನಗರದಲ್ಲಿ ನೆಲೆಸಿದ್ದ ಗುಜರಿ ವ್ಯಾಪಾರ ಮಾಡುತ್ತಿದ್ದ ಖಾಸಿಂ (೩೨) ಹಾಗೂ ರೆಂಜಲಾ ಗ್ರಾಮದ ಮೊರತ್ತಿಗುಂಡಿ ಬಳಿಯ ಬದ್ರಿಯಾ ಮಂಜಿಲ್ ನಿವಾಸಿ ವೃತ್ತಿಯಲ್ಲಿ ಚಾಲಕ ಮೊಹಮ್ಮದ್ ಸಿರಾಜುದ್ದೀನ್ (೩೭) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ೧೬೦ ಗ್ರಾಂ ತೂಕದ ೮ ಲಕ್ಷ ಬೆಲೆಬಾಳುವ ಚಿನ್ನಾಭರಣ, ಒಂದು ಲಕ್ಷ ಬೆಲೆಬಾಳುವ ವಜ್ರದ ಹರಳುಗಳು, ಎರಡು ಲಕ್ಷದ ಇಪ್ಪತ್ತಮೂರು ಸಾವಿರ ನಗದು, ಒಂದು ಲಕ್ಷ ಬೆಲೆಬಾಳುವ ಕೃತ್ಯಕ್ಕೆ ಬಳಸಿದ ಕಾರು ವಶ ಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಎಸ್ಪಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್. ಸುಂದರರಾಜ್, ನಿರ್ದೇಶನದಂತೆ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಪಿಎಸ್‌ಐಗಳಾದ ಪುನೀತ್, ಶ್ರೀಧರ್, ದಿನೇಶ್ ಕುಮಾರ್, ಎಎಸ್‌ಐ ವೆಂಕಟೇಶ್, ಅರುಣ್, ಸಿಬ್ಬಂದಿಗಳಾದ ಯೋಗೇಶ್, ನಿರಂಜನ್, ವಸಂತ್, ದಯಾನಂದ್, ಲೋಕೇಶ್,ಪ್ರಕಾಶ್, ಪ್ರವೀಣ್, ಸಂದೇಶ್,ಸಿಡಿಆರ್ ಘಟಕದ ಸಿಬ್ಬಂದಿಗಳಾದ ರಾಜೇಶ್, ಗಿರೀಶ್ ಪಾಲ್ಗೊಂಡಿದ್ದರು ಎಂದು ಮಾಹಿತಿ ಒದಗಿಸಿದರು.

ಪ್ರಕರಣವನ್ನು ಪತ್ತೆ ಹಚ್ಚಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಣೆ ಮಾಡಿರುವುದಾಗಿ ತಿಳಿಸಿದರು.