ಮಡಿಕೇರಿ, ಮಾ. ೨೫: ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ತಾ. ೨೭ರಂದು ಮಹಿಳಾ ದಿನಾಚರಣೆ ಕಾರ್ಯಕ್ರಮ ನಗರದ ಪತ್ರಿಕಾಭವನದಲ್ಲಿ ಮಧ್ಯಾಹ್ನ ೨ ಗಂಟೆಗೆ ಸಂಘದ ಅಧ್ಯಕ್ಷೆ ಮೊಣ್ಣಂಡ ರೇಖಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಧ್ಯಾ ಕಾಮತ್ ಪಾಲ್ಗೊಳ್ಳಲಿದ್ದಾರೆ. ಸಂಘದ ವತಿಯಿಂದ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಗುತ್ತದೆ. ಜಾನಪದ ಗೀತೆ, ಕಿರುನಾಟಕ, ಕವನ ವಾಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ.