ಸೋಮವಾರಪೇಟೆ, ಮಾ. ೨೫: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ವ್ಯಾಪ್ತಿಯ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಗೆ ಕೊನೆಗೂ ಕಾಲ ಕೂಡಿಬಂದಿದ್ದು, ರೂ. ೨ ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲು ಚಾಲನೆ ನೀಡಲಾಯಿತು.

ತೋಳೂರುಶೆಟ್ಟಳ್ಳಿ ದೇವಾಲಯ ಆವರಣದ ಮುಂಭಾಗ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ತೋಳೂರುಶೆಟ್ಟಳ್ಳಿ ಸಂಪರ್ಕ ರಸ್ತೆಯ ಮುನೇಶ್ವರ ದೇವಾಲಯದಿಂದ ಎರಡೂ ಬದಿಯಲ್ಲಿ ತಲಾ ೧ ಕಿ.ಮೀ.ನಂತೆ ಒಟ್ಟು ೨ ಕಿ.ಮೀ. ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಇದಕ್ಕೆ ೧ ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರು ಹಾಜರಿದ್ದು, ಗುಣಮಟ್ಟದ ಬಗ್ಗೆ ಗಮನ ಹರಿಸಬೇಕೆಂದರು.

ಅAತೆಯೇ ತೋಳೂರುಶೆಟ್ಟಳ್ಳಿ ಜಂಕ್ಷನ್‌ನಿAದ ದೊಡ್ಡಮನೆಕೊಪ್ಪ ಮಾರ್ಗದ ೨ ಕಿ.ಮೀ. ರಸ್ತೆಯನ್ನು ಅಭಿವೃದ್ಧಿಗೊಳಿಸಲು ೧ ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರೊಂದಿಗೆ ಮಲೆನಾಡು ಅಭಿವೃದ್ಧಿ ನಿಗಮದಿಂದ ೮ ಲಕ್ಷ ಅನುದಾನ ಒದಗಿಸಿದ್ದು, ಇದರಲ್ಲಿ ಸೇತುವೆಯ ಬಳಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.

ಕಾಮಗಾರಿಯನ್ನು ಗುಣಮಟ್ಟ ದಲ್ಲಿ ಕೈಗೊಳ್ಳಬೇಕು. ರಸ್ತೆ ಬದಿ ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ತಕ್ಷಣ ಪೂರ್ಣಗೊಳಿಸಬೇಕೆಂದು ಸಂಬAಧಿಸಿದ ಅಭಿಯಂತರ ಹಾಗೂ ಗುತ್ತಿಗೆದಾರರಿಗೆ ಶಾಸಕರು ಸೂಚನೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಾಜಿ ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜಿ ಸದಸ್ಯ ಧರ್ಮಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್, ಸದಸ್ಯರಾದ ಮೋಹಿತ್, ಪ್ರವೀಣ್, ರುದ್ರಪ್ಪ, ಆರತಿ, ಸಬ್ಬಮ್ಮ ದೇವಾಲಯ ಸಮಿತಿ ಅಧ್ಯಕ್ಷ ರಾಜಗೋಪಾಲ್, ಕಾರ್ಯದರ್ಶಿ ಜಗದೀಶ್, ಪ್ರಮುಖರಾದ ಕೆ.ಕೆ. ಸುಧಾಕರ್, ದಿವಾಕರ್, ಕಿಶನ್, ಉಮೇಶ್, ರಸ್ತೆ-ಮೂಲಭೂತ ಸೌಕರ್ಯ ಹೋರಾಟ ಸಮಿತಿ ಅಧ್ಯಕ್ಷ ಮಾಚಯ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.