ಮಡಿಕೇರಿ, ಮಾ. ೨೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮತಿ ಕ್ಲಿನಿಕ್ಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮತ್ತು ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಚಾಲನೆ ನೀಡಿದರು.
ನಗರದ ಮಹದೇವ ಪೇಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಮತಿ ಕ್ಲಿನಿಕ್ ಆರಂಭಕ್ಕೆ ಚಾಲನೆ ನೀಡಿ, ಮಾತನಾಡಿದ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ಆಯುಷ್ಮತಿ ಕ್ಲಿನಿಕ್ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು ಆರೋಗ್ಯಕ್ಕೆ ಸಂಬAಧಿಸಿದAತೆ ವೈದ್ಯರ ಜೊತೆ ಮುಕ್ತವಾಗಿ ಹಂಚಿಕೊಳ್ಳಲು ಆಯುಷ್ಮತಿ ಕ್ಲಿನಿಕ್ ಅನುಕೂಲವಾಗಿದೆ. ಮಹಿಳೆಯರ ಕುಂದುಕೊರತೆಗಳನ್ನು ಸಮಾಧಾನದಿಂದ ಕೇಳಿ ಆರೋಗ್ಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಆಯುಷ್ಮತಿ ಕ್ಲಿನಿಕ್ ಒಳ್ಳೆಯದು ಎಂದು ಹೇಳಿದರು. ಆರ್ಸಿಎಚ್ ಅಧಿಕಾರಿ ಡಾ. ಗೋಪಿನಾಥ್ ಮಾತನಾಡಿ, ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಮಹಿಳಾ ಆರೋಗ್ಯ ಸೇವೆಗಳಿಗಾಗಿ ರಾಜ್ಯಾದ್ಯಂತ ೧೨೮ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಆಯುಷ್ಮತಿ ಕ್ಲಿನಿಕ್ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ ಎಂದರು.
ಈ ಕ್ಲಿನಿಕ್ನಲ್ಲಿ ಉಚಿತವಾಗಿ ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫೆರಲ್ ಸೇವೆಗಳು ಲಭ್ಯವಿರುತ್ತದೆ.
ಸೋಮವಾರ ಪಿಜಿಷಿಯನ್ (ಸಾಮಾನ್ಯ ರೋಗ ತಜ್ಞರು), ಮಂಗಳವಾರ ಮೂಳೆ ಮತ್ತು ಕೀಲು ತಜ್ಞರು, ಬುಧವಾರ ಶಸ್ತç ಚಿಕಿತ್ಸಕ ತಜ್ಞರು, ಗುರುವಾರ ಮಕ್ಕಳ ತಜ್ಞರು, ಶುಕ್ರವಾರ ಸ್ತಿçà ರೋಗ ತಜ್ಞರು ಮತ್ತು ಶನಿವಾರ ಇತರ ತಜ್ಞರಲ್ಲಿ ಕಿವಿ, ಮೂಗು, ಗಂಟಲು ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ಮಾನಸಿಕ ರೋಗ ತಜ್ಞರು, ದಂತ ತಜ್ಞರು ಹಾಗೂ ಇತರ ಆರೋಗ್ಯ ತಜ್ಞರು ಪ್ರತಿ ದಿನ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧.೩೦ ಗಂಟೆವರೆಗೆ ಹಾಜರಿರುತ್ತಾರೆ. ನಗರ ವ್ಯಾಪ್ತಿಯ ಹಾಗೂ ಗ್ರಾಮೀಣ ವ್ಯಾಪ್ತಿಯ ಮಹಿಳೆಯರು ಈ ಕ್ಲಿನಿಕ್ನ ಸೇವೆ ಪಡೆಯಬಹುದು ಎಂದು ವಿವರಿಸಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ .ಸತೀಶ ಅವರು ಆಯುಷ್ಮತಿ ಕ್ಲಿನಿಕ್ ಮಹತ್ವದ ಬಗ್ಗೆ ಮಾಹಿತಿ ಪಡೆದರು. ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯೆ ಕಲಾವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಇತರರು ಇದ್ದರು.