ಮಡಿಕೇರಿ, ಮಾ. ೨೬: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಅವರ ನಿಧನ ಹಿನ್ನೆಲೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂತಾಪ ಸಭೆ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಕುರಿತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಶ್ರವಣಬೆಳಗೊಳದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ರಾಜ್ಯ ಪತ್ರಕರ್ತರ ಸಮ್ಮೇಳನಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಸಲ್ಲುತ್ತದೆ. ಅತ್ಯಂತ ಸೌಮ್ಯ ಸ್ವಭಾವದ ಸರಳತೆಯ ಪ್ರತಿರೂಪವಾಗಿದ್ದ ಶ್ರೀಗಳ ಅಗಲಿಕೆ ನಾಡಿನ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ರಮೇಶ್ ಹೇಳಿದರು.

ಈ ಸಂದರ್ಭ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮದ್, ರೇವತಿ ರಮೇಶ್, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಸಹನಾ ಕಾಂತಬೈಲು, ಮಂಜುನಾಥ್, ಮೂರ್ನಾಡು ರಮ್ಯ, ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ ಇದ್ದರು.