ಸೋಮವಾರಪೇಟೆ, ಮಾ. ೨೬: ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಶ್ರೀಮುತ್ತಪ್ಪಸ್ವಾಮಿ ದೇವಾಲಯದಿಂದ ಬೇಳೂರುವರೆಗೆ ವಿವಿಧ ಸಂಘ-ಸAಸ್ಥೆಗಳ ಸದಸ್ಯರು ಶ್ರಮದಾನ ನಡೆಸಿ, ರಸ್ತೆಯ ಎರಡೂ ಬದಿಯಲ್ಲಿ ಎಸೆಯಲಾಗಿದ್ದ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.
ಕ್ರೀಡಾ ತರಬೇತುದಾರರಾದ ಅಂತೋಣಿ ಡಿಸೋಜ ಹಾಗೂ ಕೆ.ಎ. ಪ್ರಕಾಶ್ ಅವರುಗಳ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ಕೆ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್ ಚಾಲನೆ ನೀಡಿ ಸ್ವತಃ ಶ್ರಮದಾನದಲ್ಲಿ ಭಾಗಿಯಾಗಿದ್ದರು.
ಇವರೊಂದಿಗೆ ತಾಲೂಕು ಒಕ್ಕಲಿಗರ ಯುವ ವೇದಿಕೆ, ರೋಟರಿ, ಜೇಸೀಐ, ಲಯನ್ಸ್, ರೋಮನ್ ಕ್ಯಾಥೋಲಿಕ್ ಸೇವಾ ಸಂಘ, ಮೋಟಾರ್ ಯೂನಿಯನ್, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಬೇಳೂರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ, ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಪಟ್ಟಣ ಪಂಚಾಯಿತಿ ಸದಸ್ಯರು, ಬಾಸ್ಕೆಟ್ಬಾಲ್ ಅಸೋಸಿಯೇಷನ್ನ ಪದಾಧಿಕಾರಿಗಳು, ಸಾರ್ವಜನಿಕರು ಶ್ರಮದಾನದಲ್ಲಿ ಭಾಗಿಯಾಗಿದ್ದರು.