ಸಿದ್ದಾಪುರ, ಮಾ. ೨೬: ನದಿ ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲು ಸರ್ಕಾರ ವಿಫಲವಾಗಿದ್ದು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎ.ಎಸ್. ಪೊನ್ನಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ, ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ವೀರಾಜಪೇಟೆ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆಗಳು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಶೇ. ೪೦ ಕಮಿಷನ್ ಸರ್ಕಾರವಿದ್ದು, ಈ ಸಿದ್ದಾಪುರ, ಮಾ. ೨೬: ನದಿ ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲು ಸರ್ಕಾರ ವಿಫಲವಾಗಿದ್ದು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎ.ಎಸ್. ಪೊನ್ನಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ, ಚರ್ಚ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ವೀರಾಜಪೇಟೆ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆಗಳು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಶೇ. ೪೦ ಕಮಿಷನ್ ಸರ್ಕಾರವಿದ್ದು, ಈ ಕಡಿಮೆ ಮಾಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಪೊನ್ನಣ್ಣ ಅವರು ಕ್ಷೇತ್ರದಲ್ಲಿ ಸಕ್ರಿಯವಾಗಿದ್ದು, ಜನಪರ ಕೆಲಸ ಮಾಡಿದ್ದಾರೆ. ೧೫ ವರ್ಷಗಳಿಂದ ಜನರು ಯಾತನೆ ಅನುಭವಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಗೆಲ್ಲುವ ಭರವಸೆಯನ್ನು ಹೊಂದಿದೆ ಎಂದರು.
ಮಾಜಿ ಜಿ.ಪಂ ಸದಸ್ಯ ಎಂ.ಎಸ್ ವೆಂಕಟೇಶ್ ಮಾತನಾಡಿ, ಸಿದ್ದಾಪುರ ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಭ್ಯರ್ಥಿಯ ಜಯಕ್ಕೆ ಶ್ರಮಿಸಬೇಕು ಎಂದರು.
ಇದೇ ಸಂದರ್ಭ ಚರ್ಚ್ ಹಾಲ್ ಸಮೀಪದ ಆಜಾದ್ ಹಿಂದ್ ಗ್ರೂಪ್ ಕಟ್ಟಡದ ನೂತನ ಕಚೇರಿಯನ್ನು ಪಕ್ಷದ ಮುಖಂಡರು ಉದ್ಘಾಟಿಸಿದರು. ಕಾರ್ಯಕರ್ತರ ಸಭೆಯಲ್ಲಿ ವಿವಿಧ ಪಕ್ಷಗಳನ್ನು ತೊರೆದು ೩೦ ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಅರುಣ್ ಮಾಚಯ್ಯ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಹಾರ್, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ ಪ್ರತೀಶ್, ಕಾಂಗ್ರೆಸ್ ಮುಖಂಡರಾದ ಗೋಪಾಲಕೃಷ್ಣ, ಸೂರಜ್ ಹೊಸೂರು, ಎಂ.ಹೆಚ್ ಮೂಸ, ಎಂ. ಬಿಜೋಯ್ ಸೇರಿದಂತೆ ಇನ್ನಿತರರು ಇದ್ದರು.