ಮಡಿಕೇರಿ, ಮಾ. ೨೬: ಭಾಗಮಂಡಲ ವಲಯ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ತಾ. ೨೭ ರಂದು (ಇಂದು) ನಡೆಯಲಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ವಲಯಾಧ್ಯಕ್ಷ ದೇವಂಗೋಡಿ ಎಸ್. ಹರ್ಷ, ಭಾಗಮಂಡಲದ ಕ್ಯಾಂಪ್ ನಿಶಾನಿ ರೆಸಾರ್ಟ್ನಲ್ಲಿ ಸಂಜೆ ೬ ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ರಾಜಕೀಯ, ಸಾಮಾಜಿಕ ಕಾರ್ಯಕರ್ತ ಕೋಳಿಬೈಲು ವೆಂಕಟೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕೆಪಿಸಿಸಿ ಸದಸ್ಯ ಬಿ.ಎಸ್. ರಮಾನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಸುನಿಲ್ ಜೆ. ಪತ್ರಾವೋ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.