ಸಿದ್ದಾಪುರ, ಮಾ. ೨೬: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿ.ಪಿ.ಐ.) ಪಕ್ಷ ಸ್ಪರ್ಧಿಸಲಿದೆ.
ಮಡಿಕೇರಿ ಕ್ಷೇತ್ರದಿಂದ ಕಾರ್ಮಿಕ ಮುಖಂಡ ಹಾಗೂ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಹೆಚ್.ಎಂ.ಸೋಮಪ್ಪನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
ಈ ಬಾರಿಯ ಸ್ಪರ್ಧೆ ಮಾಡುವ ಕೊಡಗು ಜಿಲ್ಲಾ ಮಂಡಳಿಯ ತೀರ್ಮಾನಕ್ಕೆ ಸಿಪಿಐ ಪಕ್ಷದ ರಾಜ್ಯ ಸಮಿತಿ ಒಪ್ಪಿಗೆ ಸೂಚಿಸಿದ್ದು ಪಕ್ಷದ ಕಚೇರಿಯಲ್ಲಿ ನಡೆದ ತಾಲೂಕು ಹಾಗೂ ಜಿಲ್ಲಾ ಸಮಿತಿ ಸಭೆ ಸೇರಿ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಸಿಪಿಐ ಕಾರ್ಯದರ್ಶಿ ಕೆ.ವಿ. ಸುನೀಲ್ ಜಿಲ್ಲೆಯ ಕಾರ್ಮಿಕರ, ರೈತರ ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿರುವ ಪಕ್ಷವಾಗಿದ್ದು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನ ಸಭೆಯಲ್ಲಿ ಧ್ವನಿಯೆತ್ತಲು ಎಡ ಪಕ್ಷ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹ ಕಾರ್ಯದರ್ಶಿಗಳಾದ ರಫೀಕ್ ನವಲಗುಂದ, ರಮೇಶ್ ಮಾಯಮುಡಿ, ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಶಭಾನ, ಜಿಲ್ಲಾ ಮಂಡಳಿ ಸದಸ್ಯರಾದ ಸೀತಾರಾಂ, ರೇಖಾಲಕ್ಷಿö್ಮ, ಮಂಜು, ಸೀನಪ್ಪ, ಮೊದಲಾದವರು ಹಾಜರಿದ್ದರು.