ನಾಪೋಕ್ಲು, ಮಾ. ೨೭: ಧರ್ಮ ರಕ್ಷಣೆಗಾಗಿ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕಾರ್ಯ ಕರ್ತರು ತಮ್ಮ ಸರ್ವಸ್ವವನ್ನೂ ಧರ್ಮಕ್ಕಾಗಿ ತ್ಯಾಗ ಮಾಡುತ್ತಾರೆ. ಅಂತವರ ರಕ್ಷಣೆಗೆ ಸಂಘಟನೆ ಸದಾ ಬದ್ಧವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ನ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ನಾಪೋಕ್ಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಮತ್ತು ಹಗ್ಗಜಗ್ಗಾಟ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು
(ಮೊದಲ ಪುಟದಿಂದ) ಅವರು ಮಾತನಾಡಿದರು. ಒಬ್ಬ ವ್ಯಕ್ತಿ ತಾನು ಮಾಡುವ ಕೆಲಸದಿಂದ ಎಲ್ಲರನ್ನು ಮೆಚ್ಚಿಸಲು ಸಾಧ್ಯವಿಲ್ಲ. ವಿಶ್ವ ಹಿಂದೂ ಪರಿಷತ್ ಎಂದಿಗೂ ಕಾರ್ಯಕರ್ತರ ಪರವಾಗಿರುತ್ತದೆ ಎಂದರು.
ದಿಕ್ಸೂಚಿ ಭಾಷಣ ಮಾಡಿದ ವಿಶ್ವ ಹಿಂದೂ ಪರಿಷತ್ನ ಕಾರ್ಯಕರ್ತೆ ಚೈತ್ರಾ ಕುಂದಾಪುರ ಇಂದು ಸಂಘಟನೆ ವತಿಯಿಂದ ಆರಂಭಗೊAಡ ಕ್ರಿಡಾಕೂಟದಂತಹ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಸಂಘಟನೆ ಬಗ್ಗೆ ಇರುವ ತಪ್ಪು ಕಲ್ಪನೆ ಬದಲಾಗಬೇಕು. ದೇಶದ ಮಹಾಪುರುಷರ ಆದರ್ಶಗಳನ್ನು ಕಾರ್ಯಕರ್ತರು ಮೈಗೂಡಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಕೊಡಗಿಗೆ ಕಡಿಮೆ ಸಂಬಳಕ್ಕೆ ಬರುವವರ ಬಗ್ಗೆ ಎಚ್ಚರವಾಗಿರಬೇಕು. ವ್ಯಾಪಾರ ವಹಿವಾಟಿನ ವಿಚಾರದಲ್ಲಿ ಸಮಾಜ ಜಾಗೃತವಾಗಿರಬೇಕು. ನಮ್ಮ ನೆಲವನ್ನು ಬೇರೆಯವರಿಗೆ ಮಾರಾಟ ಮಾಡುವಾಗ ಎಚ್ಚರವಹಿಸಬೇಕು ಎಂದರು. ಪ್ರಾಸ್ತಾವಿಕವಾಗಿ ಸಂಘಟನೆಯ ಹಿರಿಯ ಮುಖಂಡ ಕಲಿಯಂಡ ವಿಠಲ ಮಾತನಾಡಿದರು.
ಈ ಸಂದರ್ಭ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಟೀಂ ಮ್ಯಾಕ್ಸ್ವೆಲ್ ಕೊಡಗು, ದ್ವಿತೀಯ ಸ್ಥಾನ ಪಡೆದ ಶಿವಾಜಿ ಕ್ರಿಕೆರ್ಸ್ ಬೊಳ್ಳುಮಾಡು ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದ ಕಾಫಿ ಲಿಂಕ್ಸ್ ಮದೆೆನಾಡು ಹಾಗೂ ದ್ವಿತೀಯ ಸ್ಥಾನ ಪಡೆದ ಕಕ್ಕಬ್ಬೆ ತಂಡಗಳಿಗೆ ಟ್ರೋಫಿ ಮತ್ತು ನಗದು ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಬಜರಂಗದಳದ ಸಂಚಾಲಕ ರಾಧಾಕೃಷ್ಣ ರೈ ವಹಿಸಿದ್ದರು. ವೇದಿಕೆಯಲ್ಲಿ ಪ್ರಮುಖರಾದ ಬಿ.ಡಿ. ಜಗದೀಶ್ ರೈ, ಪುದಿಯೊಕ್ಕಡ ರಮೇಶ್, ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮತ್ತಿತರ ಕಾರ್ಯಕರ್ತರಿದ್ದರು.